ADVERTISEMENT

ರಾಯಚೂರು ಬಳಿ ಕಾರು ಅಪಘಾತ: ಗಬ್ಬೂರು PSI ಅರುಣ್‌ಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 9:13 IST
Last Updated 10 ನವೆಂಬರ್ 2025, 9:13 IST
<div class="paragraphs"><p>ಗಬ್ಬೂರು PSI ಅರುಣ</p></div>

ಗಬ್ಬೂರು PSI ಅರುಣ

   

ದೇವದುರ್ಗ: ತಾಲ್ಲೂಕಿನ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್‌ಐ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ರಾಯಚೂರು ತಾಲ್ಲೂಕಿನ ಮುರಾನಪುರ ಬಳಿ ಅಪಘಾತಕ್ಕೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.

ಭಾನುವಾರ (ನ.9) ಮಧ್ಯರಾತ್ರಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಪಿಎಸ್‌ಐ ಅರುಣ ಕುಮಾರ ರಾಥೋಡ್‌ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಅವರ ಪತ್ನಿ, ಇಬ್ಬರು ಮಕ್ಕಳು ಮತ್ತು ಕಾರು ಚಾಲಕನಿಗೆ ಗಾಯಗಳಾಗಿವೆ.

ADVERTISEMENT

ತಡರಾತ್ರಿ ಗಾಯಾಳುಗಳನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಸಿಎಂ ಕಾರ್ಯಕ್ರಮದ ಬಂದೊಬಸ್ತ್‌ಗೆ ಪಿಎಸ್‌ಐ ತೆರಳಿದ್ದರು. ವಾಪಸ ಬರುವಾಗ ಕುಟುಂಬದವರೊಂದಿಗೆ ಖಾಸಗಿ ಕಾರಿನಲ್ಲಿ ಬರುವಾಗ ಅಪಘಾತ ನಡೆದಿದೆ.

ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.