ಮಾನ್ವಿ: ತಾಲ್ಲೂಕಿನ ಪೋತ್ನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಆರೋಗ್ಯ ಇಲಾಖೆಯಿಂದ ಕುಷ್ಠರೋಗ ನಿರ್ಮೂಲನೆ ಬಗೆಗೆ ಜನಜಾಗೃತಿ ನಡೆಸಲಾಯಿತು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಮಾತನಾಡಿ, ‘ಕುಷ್ಠ ರೋಗವು ಮುಖ್ಯವಾಗಿ ಚರ್ಮ ಮತ್ತು ನರಗಳಿಗೆ ಸಂಬಂಧಿಸಿದಂಥ ಕಾಯಿಲೆ. ದೇಹದ ಯಾವುದೇ ಭಾಗದಲ್ಲಿ ಸ್ಪರ್ಶ ಜ್ಞಾನವಿಲ್ಲದ ಮಚ್ಚೆ, ತಿಳಿಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳು, ಮುಖದಲ್ಲಿ ಮತ್ತು ಕಿವಿಗಳ ಮೇಲೆ ಎಣ್ಣೆ ಹಚ್ಚಿದಂತೆ ಹೊಳೆಯುವುದು ಮತ್ತು ಗಂಟುಗಳು ಕಾಣಿಸುವುದು, ಕುಷ್ಠರೋಗದ ಲಕ್ಷಣಗಳಾಗಿರುತ್ತವೆ. ಪ್ರಾರಂಭದ ಹಂತದಲ್ಲಿ ಪತ್ತೆ ಹಚ್ಚಿ ಬೇಗನೇ ಚಿಕಿತ್ಸೆ ಪಡೆಯಬಹುದು’ ಎಂದರು.
ಜಿಲ್ಲಾ ಕುಷ್ಠರೋಗ ವಿಭಾಗದ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಕಾಂತ ಮಾತನಾಡಿ, ‘ಕುಷ್ಠರೋಗಕ್ಕೆ ಬಹು ಔಷದ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದು. ಒಂದರಿಂದ ಐದು ಮಚ್ಚೆಗಳಿದ್ದರೆ ಆರು ತಿಂಗಳು, ಅದಕ್ಕಿಂತ ಹೆಚ್ಚು ಮಚ್ಚೆಗಳಿದ್ದರೆ 12 ತಿಂಗಳು ಚಿಕಿತ್ಸೆ ನೀಡಲಾಗುತ್ತದೆ’ ಎಂದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶರಣಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ದೇವೇಂದ್ರಪ್ಪ ಹಾಗೂ ವಿಶ್ವರಾಧ್ಯ, ಶಿಕ್ಷಕರಾದ ಹುಸೇನಬಾಷಾ, ಮುದುಕಪ್ಪ, ಚಂದ್ರಕಾಂತ, ಶಿವಲೀಲಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.