ADVERTISEMENT

ಎಸ್ಸೆಸ್ಸೆಲ್ಸಿ | ಪ್ರಶ್ನೆಪತ್ರಿಕೆ ಅದಲುಬದಲು, ಅವಾಂತರ, ಪೋಷಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 14:22 IST
Last Updated 27 ಜೂನ್ 2020, 14:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸಿಂಧನೂರು: ನಗರದ ಶ್ರೀಕೃಷ್ಣದೇವರಾಯ ವಿದ್ಯಾಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಶನಿವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಯಲ್ಲಿ 20 ಹೊಸ ವಿದ್ಯಾರ್ಥಿಗಳಿಗೆ ಪುನರಾವರ್ತಿತ ವಿದ್ಯಾರ್ಥಿಗಳ ಪ್ರಶ್ನೆಪತ್ರಿಕೆ ಕೊಟ್ಟು ಆವಾಂತರ ಮಾಡಲಾಗಿದೆ.

ವಿದ್ಯಾರ್ಥಿಗಳು ಗೊಂದಲ ಮಾಡಿಕೊಂಡು ಉತ್ತರಿಸಿದ್ದು, ಪರೀಕ್ಷೆ ಮುಗಿದ ಬಳಿಕ ಆವಾಂತರ ಬಯಲಾಗಿದೆ. ಕೂಡಲೇ ಪಾಲಕರೆಲ್ಲ ಒಟ್ಟಾಗಿ ಪರೀಕ್ಷಾ ಕೇಂದ್ರದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಅಮರಪ್ಪ ಭೋವಿ ಅವರು, ಪಾಲಕರಿಗೆ ಸಮಜಾಯಿಷಿ ನೀಡಿದ್ದಾರೆ.

‘ಪರೀಕ್ಷೆಯಲ್ಲಿ ಕೆಲವು ವಿದ್ಯಾರ್ಥಿಗಳು ಅದಲುಬದಲಾದ ಪ್ರಶ್ನೆಪತ್ರಿಕೆಗೆ ಉತ್ತರ ಬರೆದಿದ್ದಾರೆ. ನಡೆದಿರುವ ಅವಾಂತರದ ಬಗ್ಗೆ ಶಿಕ್ಷಣ ಇಲಾಖೆಯ ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅವರ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಮರಪ್ಪ ಭೋವಿ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಪುನರಾವರ್ತಿತ ಮತ್ತು ಹೊಸ ವಿದ್ಯಾರ್ಥಿಗಳ ಪಠ್ಯಪುಸ್ತಕಗಳು ಒಂದೇ ರೀತಿಯಾಗಿದ್ದರೂ ಪಶ್ನೆಪತ್ರಿಕೆ ಅನುಕ್ರಮಣಿಕೆ ಮತ್ತು ಅಂಕಗಳು ವ್ಯತ್ಯಾಸದಿಂದ ಕೂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.