ಮಂತ್ರಾಲಯದಲ್ಲಿ ಗುರುರಾಯರ ಮಧ್ಯಾರಾಧನೆ ವಿಜೃಂಭಣೆಯಿಂದ ನಡೆಯಿತು.
ಮಂತ್ರಾಲಯ (ರಾಯಚೂರು): ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಪ್ರಯುಕ್ತ ಮಂತ್ರಾಲಯದಲ್ಲಿ ಸೋಮವಾರ ಗುರುರಾಯರ ಮಧ್ಯಾರಾಧನೆ ವಿಜೃಂಭಣೆಯಿಂದ ನಡೆಯಿತು.
ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಬೆಳಿಗ್ಗೆ ವಿಶೇಷ ಮಹಾಪಂಚಾಮೃತ ಅಭಿಷೇಕ ಹಾಗೂ ಪೂಜಾ ಕೈಂಕರ್ಯಗಳು ಜರುಗಿದವು. ನಂತರ ಮಠದ ಪ್ರಾಂಗಣದಲ್ಲಿ ಗಜ, ರಜತ ಹಾಗೂ ಚಿನ್ನದ ರಥೋತ್ಸವ ನಡೆಯಿತು.
ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕದಿಂದ ಆಗಮಿಸಿರುವ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ಸ್ವರ್ಣ ಕವಚ ರಾಯರ ವೃಂದಾವನ ಪುಷ್ಪಗಳಿಂದ ಅಲಂಕೃತಗೊಂಡಿದ್ದು, ಶ್ರೀ ಮಠದಲ್ಲಿ ಪೂಜಾ ಕಾರ್ಯಗಳು ವಿಧಿವತ್ತಾಗಿ ಸಂಪನ್ನಗೊಂಡವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.