ADVERTISEMENT

ರಸ್ತೆ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 3:15 IST
Last Updated 27 ಜೂನ್ 2022, 3:15 IST

ರಾಯಚೂರು: ದ್ವಿಚಕ್ರ ವಾಹನಕ್ಕೆ ನೀರಿನ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯವಾದ ಘಟನೆ ಭಾನುವಾರ ನಗರ ಹೊರವಲಯದ ಮರ್ಚೆಡ್ ಕ್ರಾಸ್ ಬಳಿ ಘಟನೆ ನಡೆದಿದೆ.

ತಾಲ್ಲೂಕಿನ ತಿಮ್ಮಾಪುರ ಗ್ರಾಮದ ತಿಪ್ಪಣ್ಣ(18), ಲಿಂಗಪ್ಪ(18)ಮೃತಪಟ್ಟವರು. ಗಾಯಗೊಂಡ ಉದಯ್ ಎಂಬುವವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಬಳಿಕ ಟ್ಯಾಂಕರ್ ಚಾಲಕ ಸ್ಥಳದಿಂದ ಪಾರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ವೆಂಕಟೇಶ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗ್ರಾಮೀಣ ಠಾಣೆ ಪೊಲೀಸರು ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT