ADVERTISEMENT

ರಾಯಚೂರು | ವಿಮಾನ ನಿಲ್ದಾಣ: ಅಧಿಕಾರಿಗಳ ಸಭೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2024, 14:00 IST
Last Updated 24 ಆಗಸ್ಟ್ 2024, 14:00 IST
ಬೆಂಗಳೂರಿನ ವಿಧಾನಸೌಧದಲ್ಲಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಎನ್‌.ಎಸ್. ಬೋಸರಾಜು ಉಪಸ್ಥಿತರಿದ್ದರು
ಬೆಂಗಳೂರಿನ ವಿಧಾನಸೌಧದಲ್ಲಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಎನ್‌.ಎಸ್. ಬೋಸರಾಜು ಉಪಸ್ಥಿತರಿದ್ದರು   

ರಾಯಚೂರು: ‘ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಸೂಚಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಅನುಮತಿ ಪಡೆಯಲು ಹಾಗೂ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಎನ್‌. ಎಸ್. ಬೋಸರಾಜು ಮಾತನಾಡಿದರು.

ಸಭೆಯಲ್ಲಿ ರಾಯಚೂರು ಸಂಸದ ಕುಮಾರನಾಯಕ, ಜಿಲ್ಲಾಧಿಕಾರಿ ನಿತೀಶಕುಮಾರ, ಮೂಲಭೂತ ಸೌಕರ್ಯ ಇಲಾಖೆ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಚೌಧರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.