ADVERTISEMENT

ರಾಯಚೂರು: ಅನಾರೋಗ್ಯ ಹಂಚುವ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 16:10 IST
Last Updated 18 ಡಿಸೆಂಬರ್ 2025, 16:10 IST
   

ರಾಯಚೂರು: ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡ ಗುರುವಾರ ಸ್ಟೇಷನ್‌ ರಸ್ತೆಯಲ್ಲಿರುವ ದೊಡ್ಡ ಹೋಟೆಲ್‌ ಹಾಗೂ ರೆಸ್ಟೋರಂಟ್‌ಗಳ ಮೇಲೆ ದಾಳಿ ನಡೆಸಿ ಶುಚಿತ್ವ ಪರಿಶೀಲಿಸಿ ಹೋಟೆಲ್‌ ಮಾಲೀಕರು ಹಾಗೂ ವ್ಯವಸ್ಥಾಪಕರಿಗೆ ಎಚ್ಚರಿಕೆ ನೀಡಿತು.

ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿನ ಪ್ರಮುಖ ಹೋಟೆಲ್‌ಗಳ ಮೇಲೆ ದಾಳಿ ನಡೆಸಿ ಅಲ್ಲಿನ ಅಡುಗೆ ಕೋಣೆಗಳಲ್ಲಿ ಅಶುಚಿತ್ವ ಕಂಡು ಹೋಟೆಲ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿತು.

ಅವಧಿ ಮೀರಿದ ಆಹಾರ ಪೊಟ್ಟಣಗಳನ್ನು ಪರಿಶೀಲಿಸಿತು. ಕೆಲ ಹೋಟೆಲ್‌ನಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರವನ್ನು ಗ್ರಾಹಕರಿಂದ ಪಡೆಯುತ್ತಿರುವುದು ಕಂಡು ಬಂದಿತು.

ADVERTISEMENT

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ನಜೀರ್ ಅಹಮ್ಮದ್, ಮಹಾನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ಮಹಮ್ಮದ್ ಶಾಕೀರ್ ಮೊಹಿಯುದ್ದಿನ್,

ಹಾಗೂ ಪಾಲಿಕೆ ಆರೋಗ್ಯ ನಿರೀಕ್ಷಣಾಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.