ರಾಯಚೂರು: ನಗರದ ಹೊರವಲಯದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎನ್ನುವ ಇ–ಮೇಲ್ ಬಂದ ಕಾರಣ ನಗರದಲ್ಲಿ ಆತಂಕ ಸ್ರಷ್ಟಿಯಾಗಿದೆ.
ಹೊಸ ಹಾಗೂ ಹಳೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಯದಿಂದ ಹೊರಗೆ ಓಡಿ ಹೊರಬಂದರು.
ಬಾಂಬ್ ನಿಷ್ಕ್ರಿಯ ದಳ ಸಿಬ್ವಂದಿ ಕಚೇರಿ ತಪಾಸಣೆ ನಡೆಸುತ್ತಿದೆ. ಪೊಲೀಸರು ಮೇಲ್ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಕಚೇರಿ ಸುತ್ತಮುತ್ತ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.