ADVERTISEMENT

ಕ್ರಿಮಿನಲ್‌ಗಳು ರಾಯಚೂರು ಜಿಲ್ಲೆಗೆ ಬೇಡ: ದಲಿತ ಸೇನೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 4:51 IST
Last Updated 25 ಸೆಪ್ಟೆಂಬರ್ 2025, 4:51 IST
ಮಹೇಶ್ ಶೆಟ್ಟಿ ತಿಮರೋಡಿಯನ್ನು ಮಾನ್ವಿಗೆ ಗಡಿಪಾರು ಮಾಡಿರುವುದನ್ನು ವಿರೋಧಿಸಿ ದಲಿತ ಸೇನೆ ಮತ್ತು ಸಮಾನ ಮನಸ್ಕರ ವೇದಿಕೆಯ ಕಾರ್ಯಕರ್ತರು ರಾಯಚೂರಿನಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು
ಮಹೇಶ್ ಶೆಟ್ಟಿ ತಿಮರೋಡಿಯನ್ನು ಮಾನ್ವಿಗೆ ಗಡಿಪಾರು ಮಾಡಿರುವುದನ್ನು ವಿರೋಧಿಸಿ ದಲಿತ ಸೇನೆ ಮತ್ತು ಸಮಾನ ಮನಸ್ಕರ ವೇದಿಕೆಯ ಕಾರ್ಯಕರ್ತರು ರಾಯಚೂರಿನಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು   

ರಾಯಚೂರು: ಮಹೇಶ್ ಶೆಟ್ಟಿ ತಿಮರೋಡಿಯನ್ನು ಮಾನ್ವಿಗೆ ಗಡಿಪಾರು ಮಾಡಿರುವುದನ್ನು ವಿರೋಧಿಸಿ ದಲಿತ ಸೇನೆ ಮತ್ತು ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ವೇದಿಕೆ ಅಧ್ಯಕ್ಷ ಮಾರುತಿ ಬಡಿಗೇರ, ‘ಬುರುಡೆ ಗ್ಯಾಂಗ್‌ ಮುಖ್ಯಸ್ಥ ಮಹೇಶ ತಿಮರೋಡಿಯನ್ನು ಮಾನ್ವಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಅಂತಹ ವ್ಯಕ್ತಿಗಳಿಗೆ ರಾಯಚೂರು ಜಿಲ್ಲೆ ಒಳಗೆ ಅವಕಾಶ ಕೊಡಬಾರದು’ ಎಂದು ಒತ್ತಾಯಿಸಿದರು.

‘ಮಾನ್ವಿಗೆ ಮಾಡಿರುವ ಗಡಿಪಾರು ಆದೇಶ ಹಿಂದಕ್ಕೆ ಪಡೆಯಬೇಕು. ಇಲ್ಲದಿದ್ದರೆ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ದಲಿತ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಜಾವೇದ್‌ ಖಾನ್‌ ಮಾತನಾಡಿ,‘ ರಾಯಚೂರು ಜಿಲ್ಲೆಗೆ ಕ್ರಿಮಿನಲ್‌ಗಳು ಬೇಕಿಲ್ಲ. ರಾಜ್ಯ ಸರ್ಕಾರ ಉಪ ವಿಭಾಗಾಧಿಕಾರಿಯ ಆದೇಶ ರದ್ದುಪಡಿಸಿ ಅವರನ್ನು ಬೇರೆ ಕಡೆಗೆ ಗಡಿಪಾರು ಮಾಡಬೇಕು’ ಎಂದು ಒತ್ತಾಯಿಸಿದರು.

ಅಲ್ಪಸಂಖ್ಯಾತರ ಸೌಹಾರ್ದ ಸಮಿತಿಯ ಮುಖ್ಯ ಸಂಯೋಜಕ ಆಲಂ ಘನಿ, ಮೌನೇಶ ವಡವಾಟಿ, ಮೊಹಮ್ಮದ್ ಶಾಲಂ, ವಿನೋದಕುಮಾರ ಹಾಗೂ ಅಲ್ಲಾವಲಿ ಗಬ್ಬೂರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.