ADVERTISEMENT

ರಾಯಚೂರು | ಪೌಷ್ಟಿಕ ಆಹಾರ ಕಿಟ್ ಯೋಜನೆ ಘೋಷಿಸಿ: ರಘುವೀರ ನಾಯಕ

ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್. ರಘುವೀರ ನಾಯಕ ಒತ್ತಾಯ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 8:04 IST
Last Updated 25 ಫೆಬ್ರುವರಿ 2026, 8:04 IST
ಎನ್. ರಘುವೀರ ನಾಯಕ
ಎನ್. ರಘುವೀರ ನಾಯಕ    

ರಾಯಚೂರು: ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಮುಖ ಬುಡಕಟ್ಟು ಸಮುದಾಯವಾದ ವಾಲ್ಮೀಕಿ ನಾಯಕ ಸಮುದಾಯದಲ್ಲಿ ಅಪೌಷ್ಟಿಕತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರವು ತಕ್ಷಣವೇ ಪೌಷ್ಟಿಕ ಆಹಾರ ಕಿಟ್ ಯೋಜನೆಯನ್ನು ವಿಸ್ತರಿಸಿ ಸಮುದಾಯದ ರಕ್ಷಣೆಗೆ ಮುಂದಾಗಬೇಕು’ ಎಂದು ಹೈದ್ರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್. ರಘುವೀರ ನಾಯಕ ಒತ್ತಾಯಿಸಿದರು.

ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ವಾಲ್ಮೀಕಿ ನಾಯಕ ಸಮುದಾಯವನ್ನು ಈ ಯೋಜನೆಯಿಂದ ಹೊರಗಿಟ್ಟಿರುವುದು ಅನ್ಯಾಯ ಎಂದು ಮಂಗಳವಾರ ಮಾಧ್ಯಮ ಗೋಷ್ಠಿಯಲ್ಲಿ ಅಸಮಾಧಾನ ಹೊರಹಾಕಿದರು.

ರಾಜ್ಯ ಸರ್ಕಾರ ಬಜೆಟ್‌ನಲ್ಲಿ ವಾಲ್ಮೀಕಿ ನಾಯಕ ಸಮುದಾಯಕ್ಕೂ ಪೌಷ್ಟಿಕ ಆಹಾರ ಕಿಟ್ ಯೋಜನೆಯನ್ನು ಘೋಷಿಸಿ, ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ನಾಯಕ, ಮುಖಂಡರಾದ ರಾಮು ನಾಯಕ, ರಮೇಶ ನಾಯಕ, ನರೇಂದ್ರ ನಾಯಕ, ಬೋಳಬಂಡಿ ಸೇರಿದಂತೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.