ಸಿರವಾರದಲ್ಲಿ ಸೋಮವಾರ ಮಹತ್ವಾಕಾಂಕ್ಷೆ ಕಾರ್ಯಕ್ರಮದ ಸಂಕಲ್ಪ ಸಪ್ತಾಹ ಸಮಾವೇಶ ಸಮ್ಮೇಳನದ ಸಮಾರೋಪ ಕಾರ್ಯಕ್ರಮವನ್ನು ತಾ.ಪಂ. ಇಒ ಶರ್ಫುನ್ನೀಸಾ ಬೇಗಂ ಅವರು ಉದ್ಘಾಟಿಸಿದರು
ಸಿರವಾರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ತಾಲ್ಲೂಕಿನ ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ಧಿ ಹೊಂದುವಂತೆ ಕೆಲಸ ಮಾಡಬೇಕು' ಎಂದು ತಾ.ಪಂ. ಇಒ ಶರ್ಫುನ್ನೀಸಾ ಬೇಗಂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಮಹತ್ವಾಕಾಂಕ್ಷೆ ಕಾರ್ಯಕ್ರಮದ ಸಂಕಲ್ಪ ಸಪ್ತಾಹ ಸಮಾವೇಶದ ಸಮಾರೋಪದಲ್ಲಿ ಮಾತನಾಡಿದರು.
ಕೇಂದ್ರ ಸರ್ಕಾರವು ರಾಯಚೂರು ಜಿಲ್ಲೆಯ ಮಸ್ಕಿ, ಸಿರವಾರ ತಾಲ್ಲೂಕುಗಳನ್ನು ಮಹತ್ವಾಕಾಂಕ್ಷೆ ಕಾರ್ಯಕ್ರಮದಡಿಯಲ್ಲಿ ಆಯ್ಕೆ ಮಾಡಿದ್ದು, ಆರೋಗ್ಯ, ಶಿಕ್ಷಣ, ಸಾಮಾಜಿಕವಾಗಿ ತಾಲ್ಲೂಕನ್ನು ಸಮಗ್ರವಾಗಿ ಅಭಿವೃದ್ದಿ ಮಾಡುವ ಹೊಣೆ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ ದೊಡ್ಡಮನಿ ಅವರು ಶಿಕ್ಷಣದ ಕುರಿತು,
ಸಹಾಯಕ ಕೃಷಿ ನಿರ್ದೇಶಕ ಬಿ.ಹುಸೇನ್ ಸಾಬ್ ಅವರು ಕೃಷಿ ಇಲಾಖೆಯಲ್ಲಿ ಸಿಗುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಎನ್.ಆರ್.ಎಲ್.ಎಂ. ಜಿಲ್ಲಾ ವ್ಯವಸ್ಥಾಪಕ ಪಿ.ವಿಜಯಕುಮಾರ ಅವರು ಸಾಮಾಜಿಕ ಅಭಿವೃದ್ಧಿಗೆ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕ, ಉತ್ತಮ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸ್ವ-ಸಹಾಯ ಗುಂಪಿನ ಸದಸ್ಯರುಗಳು ತಯಾರಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಯಿತು. ತಾ.ಪಂ ಸಹಾಯಕ ನಿರ್ದೇಶಕ (ಪಂ.ರಾ) ಬಸವರಾಜ, ಶಿಶು ಅಭಿವೃದಿ ಯೋಜನಾಧಿಕಾರಿ ನಾಗರತ್ನ, ತಾಲ್ಲೂಕು ಆರೋಗ್ಯಾಧಿಕಾರಿ ಪರಿಮಳಾ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಯ್ಯನಗೌಡ, ಶಾಲೆಯ ಮುಖ್ಯಶಿಕ್ಷಕ ದೇವೇಂದ್ರ ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.