ADVERTISEMENT

ರಾಯಚೂರು: ರೈತರೊಂದಿಗೆ ಕೃಷಿ ವಿಜ್ಞಾನಿಗಳ ನೇರ ಸಂವಾದ

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 14:19 IST
Last Updated 2 ಜೂನ್ 2025, 14:19 IST
ರಾಯಚೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ರೈತರೊಂದಿಗೆ ಸಂವಾದ ನಡೆಸಿದರು
ರಾಯಚೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ರೈತರೊಂದಿಗೆ ಸಂವಾದ ನಡೆಸಿದರು   

ರಾಯಚೂರು: ಇಲ್ಲಿಯ ಕೃಷಿ ವಿಜ್ಞಾನ ಕೇಂದ್ರದ ನೇತೃತ್ವದಲ್ಲಿ ಭಾರತೀಯ ತೋಟಗಾರಿಕೆ ಸಂಸ್ಥೆಯ ವಿಜ್ಞಾನಿಗಳು, ಕೃಷಿ ಅಧಿಕಾರಿಗಳು ಹಾಗೂ ಇಷ್ಟೋ ಸಂಸ್ಥೆಯ ವಿಜ್ಞಾನಿಗಳ ತಂಡ ವಿಕಸಿತ ಕೃಷಿ ಸಂಕಲ್ಪ ಅಭಿಯಾನದಡಿ ತಾಲ್ಲೂಕಿನ ಕುರ್ಡಿ, ಅರೋಲಿ, ಜಾಗೀರ ವೆಂಕಟಾಪುರ, ಗೋನಾಳ, ಫತೇಪುರ, ರಾಜೊಲಿ ಗ್ರಾಮಗಳ ರೈತರ ಜಮೀನಿಗಳಿಗೆ ಭೇಟಿ ನೀಡಿ ರೈತರೊಂದಿಗೆ ನೇರ ಸಂವಾದ ನಡೆಸಿದರು.

ಸಂವಾದ ಕಾರ್ಯಕ್ರಮಗಳಲ್ಲಿ ಕಿಸಾನ್-ಡ್ರೋನ್ ಮೂಲಕ ನ್ಯಾನೋ ರಸಗೊಬ್ಬರ ಮತ್ತು ಪೀಡೆನಾಶಕ ಸಿಂಪಡಣೆಯ ಪ್ರಾತ್ಯಕ್ಷಿಕೆ, ಕೃಷಿ ವಿಶ್ವವಿದ್ಯಾಲಯ ಮತ್ತು ಭಾರತೀಯ ಕೃಷಿ ಅನುಸಂದಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಅಧಿಕ ಇಳುವರಿ ಕೊಡುವ ತಳಿಗಳ ಮಾಹಿತಿ ನೀಡಲಾಯಿತು.

ಮಣ್ಣಿನ ಫಲವತ್ತತೆ ಕಾಪಾಡಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಹಸಿರೆಲೆ ಗೊಬ್ಬರ ಮತ್ತು ಜೈವಿಕ ಕೀಟನಾಶಕಗಳ ಮಹತ್ವ, ಕೃಷಿ ಮಾರುಕಟ್ಟೆ ಹಾಗೂ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಮಾರ್ಗದರ್ಶನ ನೀಡಿದರು.

ADVERTISEMENT

ಮೆಣಸಿನಕಾಯಿ ಬೆಳೆಯ ಮಾರುಕಟ್ಟೆ, ಇ-ಮಾರುಕಟ್ಟೆ, ಫಸಲ್ ಬಿಮಾ ಯೋಜನೆ, ಕೃಷಿ ಸಿಂಚಾಯಿ, ಹತ್ತಿ, ತೊಗರಿ ಮತ್ತು ಪಪ್ಪಾಯ, ಪೇರಲ ಹಾಗೂ ಮಾವಿನ ಬೆಳೆಗಳ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು.

ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಶ್ರೀವಾಣಿ ಜಿ.ಎನ್, ಮಲ್ಲರೆಡ್ಡಿ, ಹರೀಶ, ಎ. ನಾಗರಾಜ, ವಿಶ್ವನಾಥ, ಉಮೇಶ ಬಾಬು ಬಿ.ಎಸ್., ಅಫ್ಸನ್‌ಬಾನು, ಮಾಣಿಕ, ಅಮರೇಶ, ಶಿವಪ್ಪ ಉಪಸ್ಥಿತರಿದ್ದರು.

ಕುರ್ಡಿ, ಅರೋಲಿ, ಜಾಗೀರ ವೆಂಕಟಾಪುರ, ಗೋನಾಳ, ಫತೇಪುರ, ರಾಜೊಲಿ ಗ್ರಾಮಗಳ 1,360 ರೈತರು ಮಾಹಿತಿ ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.