ADVERTISEMENT

ರಾಯಚೂರು ಜಿಲ್ಲಾ ಕಾರಾಗೃಹಕ್ಕೆ ಅನಿರೀಕ್ಷಿತ ಭೇಟಿ ನೀಡಿದ SP ಅರುಣಾಂಗ್ಷು ಗಿರಿ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 12:31 IST
Last Updated 11 ಫೆಬ್ರುವರಿ 2026, 12:31 IST
   

ರಾಯಚೂರು: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಹಾಗೂ ಡಿಎಆರ್‌ ಡಿವೈಎಸ್‌ಪಿ ಪ್ರಮಾನಂದ ಗೋಡ್ಕೆ ಇಲ್ಲಿಯ ಜಿಲ್ಲಾ ಕಾರಾಗೃಹಕ್ಕೆ ಅನಿರೀಕ್ಷಿತ ಭೇಟಿ ಮಾಡಿ ಪರಿಶೀಲನೆ ನಡೆಸಿದರು.

ಜೈಲಿನಲ್ಲಿ ಪೊಲೀಸ್‌ ಸಿಬ್ಬಂದಿಯೊಂದಿಗೆ ತಪಾಸಣೆ ನಡೆಸಿ ಜೈಲಿನಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ವಸ್ತುಗಳನ್ನು ಇಟ್ಟುಕೊಳ್ಳಬಾರದು. ಮಾದಕ ವಸ್ತುಗಳ ಸೇವನೆ ಸಹ ಮಾಡಬಾರದು ಎಂದು ಜೈಲುವಾಸಿಗಳಿಗೆ ತಿಳಿವಳಿಕೆ ನೀಡಿದರು.

ಜೈಲಿನಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲನೆ ಮಾಡಬೇಕು ಎಂದು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜೈಲರ್‌ ಅನಿತಾ ಹಾಗೂ ಸಿಬ್ಬಂದಿ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.