ADVERTISEMENT

ಲಘು ಮೋಟಾರ್ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2025, 5:52 IST
Last Updated 5 ಸೆಪ್ಟೆಂಬರ್ 2025, 5:52 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ರಾಯಚೂರು: ಇಲ್ಲಿನ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ2025-26ನೇ ಸಾಲಿಗೆ ಕುಶಲ ಕರ್ಮಿಗಳ ತರಬೇತಿ ಸಂಘಗಳ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಪ್ರದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಲಘು ಮೋಟಾರ್ ಚಾಲನಾ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

18 ವರ್ಷ ತುಂಬಿದ ಹಾಗೂ 45 ವರ್ಷ ಮೀರದ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಳೆಗಳೊಂದಿಗೆ www.raichur.nic.in ಅರ್ಜಿ ಸಲ್ಲಿಸಬಹುದು. ಹೆಚ್ಚಿನಮಾಹಿತಿಗೆ ಉಪ ನಿರ್ದೇಶಕರು (ಗ್ರಾಮೀಣ ಕೈಗಾರಿಕೆ) ಅವರ ಕಚೇರಿ, ಕೈಗಾರಿಕೆ ಹಾಗೂ ವಾಣಿಜ್ಯ ಇಲಾಖೆ ಜಿಲ್ಲಾ ಪಂಚಾಯಿತಿ ರಾಯಚೂರು ದೂರವಾಣಿ-08532 200946 ಅಥವಾ 8105044597ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.