ಸಾವು
(ಪ್ರಾತಿನಿಧಿಕ ಚಿತ್ರ)
ರಾಯಚೂರು: ಹೊಲದಲ್ಲಿ ಜೆಸಿಬಿ ಮೂಲಕ ಕೆಲಸ ಮಾಡಿಸುವ ವೇಳೆ ಶುಕ್ರವಾರ ಸಂಜೆ ಮರ್ಚಟಹಾಳ್ ಮೂಲದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಹನುಮಂತ ಯಾದವ (44) ಮೃತಪಟ್ಟವರು. ಸಂಜೆ 4:20ರ ಸಮಯದಲ್ಲಿ ಜೋರು ಗಾಳಿ ಸಹಿತ ಮಳೆ ಗುಡುಗು ಕಾಣಿಸಿಕೊಂಡಿದೆ. ಈ ವೇಳೆ ಮರದ ಕೆಳಗೆ ಕುಳಿತಿದ್ದ ಹನುಮಂತ ಅವರಿಗೆ ಸಿಡಿಲು ಬಡಿದಿದೆ.
ಕಂದಾಯ ಇಲಾಖೆಯ ಗ್ರಾಮ ಲೆಕ್ಕದಿಕಾರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.