ರಾಯಚೂರು: ತಾಲ್ಲೂಕಿನ ಮರ್ಚಡ್ ಗ್ರಾಮದ ಕುವೆಂಪು ಮಾದರಿಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಕೊಠಡಿಗಳಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ.
ಶಾಲೆಯಲ್ಲಿನ ಪೀಠೋಪಕರಣ, ಕಂಪ್ಯೂಟರ್ ಸೇರಿ ಎಲ್ಲಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಈ ಹಿಂದೆಯೂ ಕೊಠಡಿಗಳ ಬಾಗಿಲು ಮುರಿದು ಟಿವಿ, ಕಂಪ್ಯೂಟರ್ ಹಾಳು ಮಾಡಿದ್ದ ಕಿಡಿಗೇಡಿಗಳು, ಈಗ ಮತ್ತೆ ಪುಂಡಾಟ ಮೆರೆದಿದ್ದಾರೆ.
ಈ ಹಿಂದೆ ಅಧಿಕಾರಿಗಳಿಗೆ ದೂರು ನೀಡಿದ್ದರೂ ಕ್ರಮ ಜರುಗಿಸಿಲ್ಲ. ಈಗ ಕಿಡಿಗೇಡಿಗಳು ಶಾಲೆಗೆ ಬೆಂಕಿ ಹಚ್ಚಿದ್ದಾರೆ. ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.