ADVERTISEMENT

ಆಮದಿಹಾಳದಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆ: ‘ಗ್ರಾಮದಲ್ಲಿಯ ಸಮಸ್ಯೆ ಪರಿಹರಿಸಿ’

ಆಮದಿಹಾಳದಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆ: ಶಶಿಕಲಾ ಒತ್ತಾಯ

​ಪ್ರಜಾವಾಣಿ ವಾರ್ತೆ
Published 2 ಜೂನ್ 2022, 4:23 IST
Last Updated 2 ಜೂನ್ 2022, 4:23 IST
ಮುದಗಲ್ ಸಮೀಪದ ಆಮದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ ನಡೆಯಿತು
ಮುದಗಲ್ ಸಮೀಪದ ಆಮದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ ನಡೆಯಿತು   

ಮುದಗಲ್: ಸಮೀಪದ ಆಮದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ ನಡೆಯಿತು.

ಆಮದಿಹಾಳ ಪ್ರಾಥಮಿಕ ಶಾಲೆ ಮಕ್ಕಳು ಗ್ರಾಮಸಭೆ ಉದ್ಘಾಟಿಸಿದರು.

ಮುಖ್ಯಶಿಕ್ಷಕಿ ಶೋಭಾ ಮಾತನಾಡಿ,‘ಮಕ್ಕಳ ಹಕ್ಕುಗಳ ಗ್ರಾಮಸಭೆಯಿಂದ ವಿದ್ಯಾರ್ಥಿಗಳಲ್ಲಿ ರಾಜಕೀಯ ಜ್ಞಾನ ಬೆಳೆಯುತ್ತದೆ. ಗ್ರಾಮದ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಸಹಕಾರಿಯಾಗುತ್ತದೆ’ ಎಂದು ಹೇಳಿದರು.

ADVERTISEMENT

ಲಿಂಗಸುಗೂರು ತಾಲ್ಲೂಕು ಶೃತಿ ಸಂಸ್ಕೃತಿ ಸಂಸ್ಥೆಯ ಸಂಯೋಜಕಿ ಶಶಿಕಲಾ ಮಾತನಾಡಿ,‘ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಬೇಕು’ ಎಂದು ಒತ್ತಾಯಿಸಿದರು. ಆಮದಿಹಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಗ್ರಾಮದಲ್ಲಿಯ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಆಮದಿಹಾಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದಪ್ಪ, ಗ್ರಾಮ ಪಂಚಾಯಿತಿ ಸದಸ್ಯರು, ಶಾಲೆಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮಕ್ಕಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.