ADVERTISEMENT

ರಾಯಚೂರು: ಕೆಡಿಪಿ ಸಭೆಯಲ್ಲಿ ರಮ್ಮಿ ಆಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ!

​ಪ್ರಜಾವಾಣಿ ವಾರ್ತೆ
Published 18 ಜುಲೈ 2025, 13:10 IST
Last Updated 18 ಜುಲೈ 2025, 13:10 IST
<div class="paragraphs"><p>ರಾಯಚೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ  ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲೇ ಅಧಿಕಾರಿಯೊಬ್ಬರು ಮೊಬೈಲ್‌ನಲ್ಲಿ ರಮ್ಮಿ ಆಡಿದರು </p><p></p></div>

ರಾಯಚೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲೇ ಅಧಿಕಾರಿಯೊಬ್ಬರು ಮೊಬೈಲ್‌ನಲ್ಲಿ ರಮ್ಮಿ ಆಡಿದರು

   

ರಾಯಚೂರು: ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಸಭಾ ಗೌರವ ಕಾಯ್ದುಕೊಳ್ಳುವಂತೆ ಜಿಲ್ಲೆಯ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರನ್ನು ತರಾಟೆಗೆ ಕೊಳ್ಳುತ್ತಿದ್ದರೆ, ಕೆಲವು ಅಧಿಕಾರಿಗಳು ಮೊಬೈಲ್‌ ನೋಡುತ್ತ ಕಾಲ ಕಳೆಯುತ್ತಿದ್ದರು.

ADVERTISEMENT

ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ ಅವರು ಸಭಾಂಗಣದಲ್ಲೇ ಕುಳಿತು ಬಹಳ ಹೊತ್ತಿನವರೆಗೂ ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದರು. ಇದನ್ನು ಗಮನಿಸಿದ ಒಬ್ಬರು ದೃಶ್ಯವನ್ನು ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಷಯ ಸಚಿವರ ಗಮನಕ್ಕೆ ಬರುತ್ತಿದ್ದಂತೆಯೇ ಅವರನ್ನು ಸಭೆಯಿಂದ ಹೊರಗೆ ಕಳಿಸಿದರು. ಡಿಸಿಎಫ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ನೀವು ಗಂಭೀರವಾಗಿಲ್ಲ, ಅಧಿಕಾರಿಗಳು ಗಂಭೀರವಾಗಿಲ್ಲ. ಕನಿಷ್ಠ ಪಕ್ಷ ಶಾಸಕರ ಗೌರವವನ್ನಾದರೂ ಉಳಿಸಿ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸುತ್ತಿರುವಾಗಲೇ ವಿಡಿಯೊ ತೆಗೆಯಲಾಗಿದೆ. ಶಾಸಕರು ಮಾತನಾಡುವ ಭರದಲ್ಲಿ ಏಕವಚನದಲ್ಲಿ ಮಾತನಾಡಿ ಸಚಿವರೇ ಮುಜುಗರಕ್ಕೆ ಒಳಗಾಗುವಂತೆ ಮಾಡಿದರು.

ಇದೆಲ್ಲವನ್ನೂ ನೋಡುತ್ತ ಕುಳಿತಿದ್ದ ಅಧಿಕಾರಿಗಳಲ್ಲಿ ಒಬ್ಬರು ಮೂಗಲ್ಲಿ ತೋರು ಬೆರಳು, ಇನ್ನೊಬ್ಬರು ಕಿವಿಯಲ್ಲಿ ಪೆನ್ನು ಹಾಕಿ ತಿರುವಿಕೊಳ್ಳುತ್ತಿದ್ದರು. ಪತ್ರಕರ್ತರ ಆಸನದಲ್ಲೂ ಪತ್ರಕರ್ತರಲ್ಲದವರು ಬಂದು ಕುಳಿತಿದ್ದರು. ಜಾಗ ಇಲ್ಲದ ಕಾರಣ ಪತ್ರಕರ್ತರು ಶಾಸಕರ ಜಾಗದಲ್ಲಿ ಕುಳಿತುಕೊಂಡಿದ್ದರು. ಒಟ್ಟಾರೆ ಸಭೆ ಅವ್ಯವಸ್ಥೆಯ ಗೂಡಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.