
ರಾಯಚೂರು: ಜಿಲ್ಲಾಡಳಿತದ ವತಿಯಿಂದ ಇಲ್ಲಿಯ 76ನೇ ಗಣರಾಜ್ಯೋತ್ಸವದ ಅಂಗವಾಗಿ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ಧ್ವಜಾರೋಹಣ ನೆರವೇರಿಸಿದರು.
ಕ್ರೀಡಾಂಗಣದಲ್ಲಿ ನಾಗರಿಕ ಪೊಲೀಸ್, ಗೃಹರಕ್ಷಕ ದಳ, ಜಿಲ್ಲಾ ಸಶಸ್ತ್ರ ಪಡೆ, ಎನ್‌ಸಿಸಿ, ಎನ್‌ಎಸ್‌ಎಸ್, ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು. ನಂತರ ವಿದ್ಯಾರ್ಥಿಗಳು ದೇಶ ಭಕ್ತಿಗೀತೆಗೆ ಹೆಜ್ಜೆ ಹಾಕಿದರು. ವಿದ್ಯಾರ್ಥಿಗಳ ಸಮೂಹ ನೃತ್ಯ ಸಾರ್ವಜನಿಕರ ಗಮನ ಸೆಳೆಯಿತು.
ಮುಖ್ಯ ಅತಿಥಿಗಳಾಗಿ ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ, ಮಹಾನನಗರ ಪಾಲಿಕೆ ಮೇಯರ್ ನರಸಮ್ಮ ಮಾಡಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಜಿಲ್ಲಾಧಿಕಾರಿ ನಿತೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ,
ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ತಹಶೀಲ್ದಾರ್ ಸುರೇಶ ವರ್ಮಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.