ರಾಯಚೂರು: ನಗರದ ಮಾವಿನಕೆರೆಯ ದಂಡೆಯಲ್ಲಿ ನೆಟ್ಟಿರುವ ಗಿಡಗಳನ್ನು ರಕ್ಷಣೆ ಮಾಡಬೇಕು ಎಂದು ಪರಿಸರ ಪ್ರೇಮಿ, ಸಾಮಾಜಿಕ ಕಾರ್ಯಕರ್ತ ಕೆ. ಈರಣ್ಣ ಕೋಸಗಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಮಾವಿನಕೆರೆಯ ಬಳಿ ಕಳೆದ ಐದು ವರ್ಷಗಳ ಹಿಂದೆ ಮಾವಿನ ಕೆರೆಯ ದಂಡೆಗೆ ಸುಮಾರು 200ಕ್ಕೂ ಹೆಚ್ಚು ಗಿಡಗಳನ್ನು ಪೋಷಣೆ ಮಾಡಿದ್ದು, ಕೆಲ ಕಿಡಿಗೇಡಿಗಳು ಕೆರೆಯ ಸುತ್ತಮುತ್ತು ಕಟ್ಟಡಗಳ ಅವಶೇಷ ಹಾಕಿ ಒತ್ತುವರಿ ಮಾಡಿ ಗಿಡಗಳನ್ನು ನಾಶ ಮಾಡುತ್ತಿದ್ದಾರೆ. ಇದರಿಂದ ಅನೇಕ ಗಿಡಗಳು ಹಾಳಾಗಿವೆ. ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.