
ಪ್ರಜಾವಾಣಿ ವಾರ್ತೆ
ಸಿಂಧನೂರು: ಫೆ.26 ರಿಂದ 28ರವರೆಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಹಿಳೆಯರ ಗುಡ್ಡ-ಗಾಡು ಓಟದ ಸ್ಪರ್ಧೆಗೆ ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ತಂಡಕ್ಕೆ ಸಿಂಧನೂರು ನಗರದ ಸರ್ಕಾರಿ ಮಹಾವಿದ್ಯಾಲಯದ ಬಿ.ಎ 6ನೇ ಸೆಮಿಸ್ಟರ್ ವಿದ್ಯಾರ್ಥಿನಿ ಪಾರ್ವತಿ ತಿಮ್ಮಯ್ಯ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಸದಸ್ಯರು, ಕಾಲೇಜಿನ ಪ್ರಾಂಶುಪಾಲ ಪ್ರೊ.ಪಾಂಡು, ಹಿರಿಯ ಪ್ರಾಧ್ಯಾಪಕಿ ಪ್ರೊ.ಪುಷ್ಪ, ಮೊಹಮ್ಮದ್ ಸಿದ್ದಿಕಿ, ಸಹಾಯಕ ಪ್ರಾಧ್ಯಾಪಕಿ ದಿವ್ಯ, ಉಪನ್ಯಾಸಕ ರಾಜೇಶ.ಎಂ, ದೈಹಿಕ ಶಿಕ್ಷಣ ವಿಭಾಗದ ಸಂಯೋಜಕ ಡಾಲವಕುಮಾರ, ದೈಹಿಕ ಶಿಕ್ಷಣ ನಿರ್ದೇಶಕ ಶಿವ.ಕೆ ಸೇರಿದಂತೆ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.