ರಾಯಚೂರು: ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಆಶ್ರಯದಲ್ಲಿ ರಾಯಚೂರು ತಾಲ್ಲೂಕಿನ ಆಯ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಬೇಸಿಗೆ ಸಂಭ್ರಮ ಶಿಬಿರ ನಡೆಯಿತು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೇಂಟಿಂಗ್, ಚಿತ್ರಕಲೆ, ವಿಜ್ಞಾನದ ಚಟುವಟಿಕೆ, ಗಾಯನ, ಕಥೆ ಕಟ್ಟುವುದು ಹಾಗೂ ಪರಿಸರದ ಪರಿಚಯ ಇತ್ಯಾದಿ ವಿಷಯಗಳ ಕುರಿತು ಚಟುವಟಿಕೆಯ ರೂಪದಲ್ಲಿ ಮಕ್ಕಳಿಗೆ ತಿಳಿಸಲಾಯಿತು.
ಸಂಗಮಕುಂಟ ಶಾಲೆಯಲ್ಲಿ ನಡೆದ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ ಮಾತನಾಡಿ, ‘ವಿದ್ಯಾರ್ಥಿಗಳು ಸದಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು’ ಎಂದು ಹೇಳಿದರು.
‘ಮಕ್ಕಳಲ್ಲಿ ಶೈಕ್ಷಣಿಕ ಚಿಂತನೆ ಹಾಗೂ ವೈಜ್ಞಾನಿಕ ಮನೋಭಾವ ಮೂಡಲು ಇಂತಹ ಶಿಬಿರಗಳು ಬಹಳ ಅನುಕೂಲ. ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನಿ ಸಮಿತಿ ಜಂಟಿಯಾಗಿ ಎಂಟು ಕೇಂದ್ರಗಳಲ್ಲಿ ಶಿಬಿರಗಳನ್ನು ನಡೆಸಲಾಗಿದೆ’ ಎಂದು ತಿಳಿಸಿದರು.
ಭಾರತ ಜ್ಞಾನ ವಿಜ್ಞಾನಿ ಸಮಿತಿ ರಾಜ್ಯ ಸಂಚಾಲಕ ಸೈಯದ್ ಹಫೀಜುಲ್ಲಾ, ರಾಘವೇಂದ್ರ ಹಾಗೂ ಶಾಲೆಯ ಮುಖ್ಯಪಾದ್ಯರು, ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.