ADVERTISEMENT

ರಾಯಚೂರು ವಿವಿ ಸ್ಥಾಪನೆ; ರಾಜ್ಯಪಾಲರ ಭೇಟಿ– ಸಚಿವ

​ಪ್ರಜಾವಾಣಿ ವಾರ್ತೆ
Published 18 ಜೂನ್ 2019, 12:29 IST
Last Updated 18 ಜೂನ್ 2019, 12:29 IST
ವೆಂಕಟರಾವ್‌ ನಾಡಗೌಡ
ವೆಂಕಟರಾವ್‌ ನಾಡಗೌಡ   

ರಾಯಚೂರು:‘ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದೆ ಕಡತ ವಾಪಸ್‌ ಕಳುಹಿಸಿದ್ದಾರೆ. ಈ ವಿಷಯ ಕುರಿತು ಮುಖ್ಯಮಂತ್ರಿಯೊಂದಿಗೆ ಸಮಾಲೋಚನೆ ಮಾಡಲಾಗುವುದು. ಕೂಡಲೇ ಶಿಕ್ಷಣ ಸಚಿವರೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿ ವಿಶ್ವವಿದ್ಯಾಲಯ ಅಗತ್ಯತೆಯ ಕುರಿತು ಮನವರಿಕೆ ಮಾಡಲಾಗುವುದು’ ಎಂದು ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಚಿವ ಸಂಪುಟದಲ್ಲಿ ಈಚೆಗೆ ಕೈಗೊಂಡಿದ್ದ ನಿರ್ಧಾರದಂತೆ ಸರ್ಕಾರವು ಸುಗ್ರೀವಾಜ್ಞೆ ಹೊರಡಿಸಿತ್ತು. ಆದರೆ, ವಿಶ್ವವಿದ್ಯಾಲಯ ಸ್ಥಾಪನೆಯ ಜರೂರತ್ತು ಏನಿದೆ ಎಂದು ರಾಜ್ಯಪಾಲರು ಪ್ರಶ್ನೆ ಹಾಕಿ, ಕಡತ ವಾಪಸ್‌ ಕಳುಹಿಸಿದ್ದಾರೆ. ಈ ಬಗ್ಗೆ ಉತ್ತರ ಸಿದ್ಧಪಡಿಸುವಂತೆ ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT