ADVERTISEMENT

ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆಗೆ ಒತ್ತಾಯ : ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2019, 7:13 IST
Last Updated 24 ಜೂನ್ 2019, 7:13 IST
   

ರಾಯಚೂರು: ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆ ನನೆಗುದಿಗೆ ಬೀಳುತ್ತಿರುವುದನ್ನು ವಿರೋಧಿಸಿ ಹಾಗೂ ವಿಶ್ವವಿದ್ಯಾಲಯ ತುರ್ತು ಆರಂಭಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸ್ನಾತಕೋತ್ತರ ಪರೀಕ್ಷೆ ಬರೆಯಲು ಹಾಜರಾದ ವಿದ್ಯಾರ್ಥಿಗಳು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಸೋಮವಾರ ಪ್ರತಿಭಟನೆ ನಡೆಸಿದರು.

ರಾಜ್ಯಪಾಲರಿಂದ ವಾಪಸಾದ ಸುಗ್ರೀವಾಜ್ಞೆ ಕಡತಕ್ಕೆ ಸೂಕ್ತ ಉತ್ತರ ಬರೆದು, ಜೂನ್ 28 ರೊಳಗೆ ಒಪ್ಪಿಗೆ ಪಡೆಯಬೇಕು. ಇದೇ ಶೈಕ್ಷಣಿಕ ವರ್ಷದಿಂದ ವಿಶ್ವವಿದ್ಯಾಲಯ ಆರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT