
ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಯಚೂರು ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಫೆ.5 ರಿಂದ ಫೆ.7ರವರೆಗೆ ನಡೆಯಲಿರುವ
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಪ್ರಚಾರಾರ್ಥ ಸಿದ್ಧಪಡಿಸಿದ ವಿಶೇಷ ವೆಬ್‌ಸೈಟ್ ಬಿಡುಗಡೆ ಮಾಡಲಾಯಿತು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರು ವೆಬ್‌ಸೈಟ್ ಉದ್ಘಾಟಿಸಿ ಮಾತನಾಡಿ, ‘ಉತ್ಸವದ ಪ್ರಚಾರ ಸಮಿತಿಯು ಸಿದ್ಧಪಡಿಸಿರುವ ಈ ವೆಬ್‌ಸೈಟ್‌ನಲ್ಲಿ ಉತ್ಸವದ ಎಲ್ಲ ಕಾರ್ಯಕ್ರಮಗಳ ಸಂಕ್ಷಿಪ್ತ ಮಾಹಿತಿ, ಛಾಯಾಚಿತ್ರಗಳು, ಪೋಸ್ಟರ್, ವಿಶೇಷ ವಿಡಿಯೊಗಳು, ಪ್ರತಿ ದಿನ ನಡೆಯುವ ವಿವಿಧ ಚಟುವಟಿಕೆಗಳ ವಿವರ ಸೇರಿದಂತೆ ಉತ್ಸವದ ಕಾರ್ಯಕ್ರಮಗಳ ಮಾಹಿತಿಗಾಗಿ www.raichurutsava.com ಲಿಂಕ್ ಬಳಸಿ ವೆಬ್‌ತಾಣಕ್ಕೆ ಭೇಟಿ ನೀಡಬಹುದಾಗಿದೆ‘ ಎಂದರು.
‘ರಾಯಚೂರು ಜಿಲ್ಲೆ ಸೇರಿದಂತೆ ವಿಶ್ವದ ಯಾವುದೇ ಭಾಗದಲ್ಲಿನ ಜನತೆ ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಉತ್ಸವದ ಮಾಹಿತಿ ಪಡೆಯಲು ಮತ್ತು ಉತ್ಸವದಲ್ಲಿ ಭಾಗಿಯಾಗಲು ಅನುಕೂಲವಾಗುವಂತೆ ಈ ವೆಬ್‌ಸೈಟ್ ರಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ . ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪವನಕೀಶೋರ ಪಾಟೀಲ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ರೈತ ಸಂಘದ ಅಧ್ಯಕ್ಷ ಚಾಮರಸ ಪಾಟೀಲ, ರಾಜ್ಯ ನೀತಿ ಆಯೋಗದ ಸದಸ್ಯ ಡಾ.ರಝಾಕ್ ಉಸ್ತಾದ್, ಮಹಾನಗರ ಪಾಲಿಕೆಯ ಸಮಿತಿಯ ಕಾರ್ಯದರ್ಶಿ ಹಾಗೂ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೃಷ್ಣ ಶಾವಂತಗೇರಿ, ಮಹಾನಗರ ಪಾಲಿಕೆಯ ಉಪ ಆಯುಕ್ಷೆ ಸಂತೋಷರಾಣಿ, ವಾರ್ತಾ ಇಲಾಖೆಯ ಗವಿಸಿದ್ದಪ್ಪ ಹೊಸಮನಿ, ತಹಶೀಲ್ದಾರ್ ಸುರೇಶ ವರ್ಮಾ, ಅಮರೇಶ ಬಿರಾದಾರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.