ರಾಯಚೂರು: ಕೇಂದ್ರ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಮಾರಾಟವಾಗುವ ಯೂರಿಯಾ ಗೊಬ್ಬರ ಫ್ಯಾಕ್ಟರಿಗಳಲ್ಲಿ ಬಳಸಲಾಗುತ್ತಿದೆಯೇ ಎನ್ನುವ ಕುರಿತು ರಾಯಚೂರು ತಾಲ್ಲೂಕಿನ ಕೃಷಿ ಇಲಾಖೆಯ ಜಾಗೃತ ದಳದ ಅಧಿಕಾರಿಗಳು ನಗರದ ಕೈಗಾರಿಕೆ ಪ್ರದೇಶದಲ್ಲಿನ ಫ್ಯಾಕ್ಟರಿಗಳಿಗೆ ತೆರಳಿ ಪರಿಶೀಲನೆ ಮಾಡಿದರು.
ಮುಂಗಾರು ಹಂಗಾಮು ಆರಂಭವಾಗಿರುವುದರಿಂದ ಕೃಷಿ ಕ್ಷೇತ್ರ ಬಿಟ್ಟು ಅನ್ಯ ಉದ್ದೇಶಕ್ಕೆ ಯೂರಿಯಾ ಗೊಬ್ಬರ ಉಪಯೋಗಬಾರದು. ಫ್ಯಾಕ್ಟರಿಗಳಲ್ಲಿ ಯುರಿಯಾ ಬಳಕೆ ಕಂಡು ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಕೃಷಿ ಇಲಾಖೆಯ ಜಾಗೃತ ದಳದ ಅಧಿಕಾರಿ ಶರಣಮ್ಮ ಪಾಟೀಲ, ಅಧಿಕಾರಿ ಸುನೀಲ ಮತ್ತು ಗರ್ಜಪ್ಪ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.