ಮಸ್ಕಿ: ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆಗೆ ತಾಲ್ಲೂಕಿನ ವಿವಿಧೆಡೆ ಭತ್ತದ ಬೆಳೆ ನೆಲಕಚ್ಚಿದೆ.
ತಾಲ್ಲೂಕಿನ ಬಸಾಪೂರ, ಹಾಲಾಪೂರ, ಜಂಗಮರಹಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಬೆಳೆ ನಾಶವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಶನಿವಾರ ರಾತ್ರಿ 6 ರಿಂದ ಸುಮಾರು 4 ಗಂಟೆಗಳ ಕಾಲ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ.
ಬಸಾಪೂರ ಗ್ರಾಮದ ಮಲ್ಲಪ್ಪ ಸಜ್ಜನ ಅವರು ಮೂರು ಎಕರೆಯಲ್ಲಿ ಬೆಳೆದಿದ್ದ ಭತ್ತ ಮಳೆಗೆ ಹಾಳಾಗಿದೆ. ಸ್ಥಳಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
‘ಮಳೆಯಿಂದಾದ ನಷ್ಟದ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ’ ಎಂದು ತಹಶೀಲ್ದಾರ್ ಕವಿತಾ ಆರ್. ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.