ADVERTISEMENT

ಲಿಂಗಸುಗೂರು, ಮಸ್ಕಿಯಲ್ಲಿ ಸಾಧಾರಣ ಮಳೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2024, 15:57 IST
Last Updated 11 ಏಪ್ರಿಲ್ 2024, 15:57 IST
ಲಿಂಗಸುಗೂರು ಪಟ್ಟಣದಲ್ಲಿ ಗುರುವಾರ ಸಾಧಾರಣ ಮಳೆ ಸುರಿಯಿತು
ಲಿಂಗಸುಗೂರು ಪಟ್ಟಣದಲ್ಲಿ ಗುರುವಾರ ಸಾಧಾರಣ ಮಳೆ ಸುರಿಯಿತು   

ರಾಯಚೂರು: ಲಿಂಗಸುಗೂರು, ಮಸ್ಕಿ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಸಂಜೆ 15 ನಿಮಿಷ ಸಾಧಾರಣ ಮಳೆಯಾಗಿದೆ.

40 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶದಿಂದಾಗಿ ಸುಸ್ತಾಗಿದ್ದ ಪಟ್ಟಣದ ಜನತೆಗೆ ಮಳೆ ತಂಪೆರಚಿತು. ಸಂಜೆ ಭಾರಿ ಗಾಳಿ‌ ಹಾಗೂ ಗುಡುಗು ಸಹಿತ ತುಂತುರು ಮಳೆ ಸುರಿಯಿತು. ರಸ್ತೆ ಮೇಲೆ ಮಳೆ ನೀರು ಹರಿಯಿತು. ಸೆಕೆಯಿಂದ ಬೇಸತ್ತಿದ್ದ ಕೆಲವರು ಮಳೆಯಲ್ಲಿ ತೊಯ್ಯಿಸಿಕೊಂಡು ಸಂಭ್ರಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT