ಸಾವು
(ಪ್ರಾತಿನಿಧಿಕ ಚಿತ್ರ)
ಸಿಂಧನೂರು: ತಾಲ್ಲೂಕಿನ ರಾಮತ್ನಾಳ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಜಲಾಲ್ ನಾಯಕ (38) ಬುಧವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೌಟುಂಬಿಕ ಕಲಹ ಮತ್ತು ಸಾಲದ ಬಾಧೆಯಿಂದ ಬೇಸತ್ತು ಬನ್ನಿಗನೂರು ಗ್ರಾಮದ ತಮ್ಮ ಜಮೀನಿನಲ್ಲಿರುವ ಮನೆಯಲ್ಲಿ ಜಲಾಲ್ ನಾಯಕ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಈ ವಿಷಯ ತಿಳಿದ ಕುಟುಂಬಸ್ಥರು ತಕ್ಷಣ ಸಿಂಧನೂರು ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ದಾರಿ ಮಧ್ಯೆ ಜಲಾಲ್ ನಾಯಕ ಮೃತಪಟ್ಟಿದ್ದಾರೆ. ನಂತರ ಆಸ್ಪತ್ರೆಗೆ ಮೃತದೇಹ ತಂದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಬಳಗಾನೂರು ಪೊಲೀಸ್ ಠಾಣೆಯ ಸಬ್‍ಇನ್‌ಸ್ಪೆಕ್ಟರ್ ಯರಿಯಪ್ಪ ಅಂಗಡಿ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡರು. ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಪನಗೌಡ ಬಾದರ್ಲಿ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.