ADVERTISEMENT

ಡಿಕೆಶಿ ಬಗ್ಗೆ ರಮೇಶ ಜಾರಕಿಹೊಳಿ ಹೇಳಿದ್ದು ರಾಜಕೀಯ ಪ್ರೇರಿತ: ಸಚಿವ ಶರಣಪ್ರಕಾಶ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2023, 10:41 IST
Last Updated 1 ನವೆಂಬರ್ 2023, 10:41 IST
<div class="paragraphs"><p>ಸಚಿವ ಶರಣಪ್ರಕಾಶ ಪಾಟೀಲ</p></div>

ಸಚಿವ ಶರಣಪ್ರಕಾಶ ಪಾಟೀಲ

   

– ಪ್ರಜಾವಾಣಿ ಚಿತ್ರ

ರಾಯಚೂರು: 'ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಬಗ್ಗೆ ನೀಡಿದ ಹೇಳಿಕೆ ರಾಜಕೀಯ ಬೇಳೆ ಬೇಯಿಸಿಕೊಳ್ಳುವಂತಹದ್ದು ಇದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಾಗಿಲ್ಲ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ತಿಳಿಸಿದರು.

ADVERTISEMENT

'ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ರಮೇಶ ಜಾರಕಿಹೊಳಿ ಅವರು ಸಿಡಿ ಪ್ರಕರಣದ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಈ ಹಿಂದೆ ತಮ್ಮದೇ ಬಿಜೆಪಿ ಸರ್ಕಾರ ಇರುವಾಗ ಏನು ಮಾಡಿದ್ದಾರೆ ಆಗ ಸರ್ಕಾರಕ್ಕೆ ಕೇಳಬಹುದಿತ್ತು' ಎಂದು ರಾಯಚೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ತುಂಗಭದ್ರ ಎಡದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪಿಸಲು ಗಣೇಕಲ್‌ ಜಲಾಶಯದಲ್ಲಿ‌ ನೀರು ತುಂಬಿಸಲು ಮುಖ್ಯಮಂತ್ರಿ‌ ಅವರ‌ ಜೊತೆ ಚರ್ಚಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು. ನೀರು ನಿರ್ವಹಣೆ ವಿಷಯದಲ್ಲಿ ಸರ್ಕಾರ ವಿಫಲವಾಗಿಲ್ಲ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಅತ್ತನೂರು ಸೇರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಳಿಗೆ ಸೂಚನೆ ನೀಡಲಾಗುವುದು. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಶೀಘ್ರ ಸಭೆ ನಡೆಸಲಾಗುವುದು’ ಎಂದರು.

‘ವೈದ್ಯಕೀಯ ಕಾಲೇಜುಗಳ ಬಗ್ಗೆ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿ ಪ್ರತಿ 10ಲಕ್ಷ ಜನಸಂಖ್ಯೆಗೆ 100 ಸೀಟ್ ಗಿಂತ ಹೆಚ್ಚು ಇರಬಾರದು ಎಂದು ಆದೇಶ ಮಾಡಿದ್ದು ಖಂಡನೀಯ. ಇದು ಕರ್ನಾಟಕ ಹಾಗೂ ದಕ್ಷಿಣ ಭಾರತದ ವಿರೋಧಿ ನೀತಿಯಾಗಿದೆ. ಈ‌ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು ಅಗತ್ಯಬಿದ್ದರೆ ಕಾನೂನಿನ ಹೋರಾಟಕ್ಕೆ ಮುಂದಾಗುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.