
ರಾಯಚೂರು: ದೊಂಬಿ, ಕೊಲೆ ಪ್ರಕರಣದ ಅಪರಾಧಗಳಲ್ಲಿ ಪಾಲ್ಗೊಂಡು ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಭಂಗ ತರುತ್ತಿರುವ ಆರೋಪದ ಮೇಲೆ ತಾಲ್ಲೂಕಿನ ಮಿರ್ಜಾಪುರ ಐವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ರಾಯಚೂರು ಉಪ ವಿಭಾಗಾಧಿಕಾರಿ ಗಜಾನನ ಬಾಳೆ ಆದೇಶ ಹೊರಡಿಸಿದ್ದಾರೆ.
ಮಿರ್ಜಾಪುರದ ಮಲದಕಲ್ ಮಲ್ಲಿಕಾ ರ್ಜುನನನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಡಚಣ ಪೋಲಿಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ಆರೋಲಿ ಭೀಮಣ್ಣನನ್ನು ಇಂಡಿ ತಾಲ್ಲೂಕಿನ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಗೆ, ಗೋರೆಪ್ಪನನ್ನು ಹೊರ್ತಿ ಪೋಲಿಸ್ ಠಾಣೆ ವ್ಯಾಪ್ತಿಗೆ, ತಾಯಪ್ಪನನ್ನು ಝಳಕಿ ಪೋಲಿಸ್ ಠಾಣೆ ವ್ಯಾಪ್ತಿಗೆ ಹಾಗೂ ಆಲಾದಿಯನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕೂಡ್ಲಿಗಿ ಪೋಲಿಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ಗಡಿಪಾರುಗೊಂಡವರು 2026ರ ಜನವರಿ 6ವರೆಗೆ ಆಯಾ ಪೋಲಿಸ್ ಠಾಣೆಗೆ ಹಾಜರಾದ ವರದಿಯನ್ನು ಸಲ್ಲಿಸುವಂತೆ ಠಾಣಾಧಿಕಾರಿಗೆ ತಿಳಿಸಿದ್ದಾರೆ. ಗಡಿಪಾರು ಅವಧಿಯಲ್ಲಿ ಗಡಿಪಾರು ಮಾಡಲಾಗಿದ್ದ ವ್ಯಕ್ತಿಗಳು ಚಲನವಲನಗಳ ಬಗ್ಗೆ ನಿಗಾವಹಿಸಿ ಗಡಿಪಾರು ಆದೇಶವನ್ನು ಉಲ್ಲಂಘಿಸಿ ರಾಯಚೂರು ಜಿಲ್ಲಾ ವ್ಯಾಪ್ತಿಯಲ್ಲಿ ಪ್ರವೇಶ ಮಾಡಿದಲ್ಲಿ ಅವರ ಮೇಲೆ ಸೂಕ್ತ ಕ್ರಮ ಕಾನೂನು ಕ್ರಮ ಜರುಗಿಸಬೇಕು. ಆರೋಪಿಗಳು ಪ್ರತಿವಾರ ಆಯಾ ಪೊಲೀಸ್ ಠಾಣೆಗೆ ಹೋಗಿ ಹಾಜರಿ ನೀಡಬೇಕು ಎಂದು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.