ಮಸ್ಕಿ: ಕಾಯಕಯೋಗಿ ಬಸವೇಶ್ವರ ಜಯಂತಿಯನ್ನು ಬುಧವಾರ ಪಟ್ಟಣದ ವಿವಿಧೆಡೆ ಆಚರಿಸಲಾಯಿತು. ತಾಲ್ಲೂಕು ಆಡಳಿತದ ಪರವಾಗಿ ಬಸವ ವೃತ್ತದಲ್ಲಿನ ಬಸವೇಶ್ವರರ ಪ್ರತಿಮೆಗೆ ಶಾಸಕರೂ ಆದ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ತಹಶೀಲ್ದಾರ್ ಮಲ್ಲಪ್ಪ ಯರಗೋಳ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೈಬೂಸಾಬ ಮುದ್ದಾಪೂರ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ್, ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪುರಸಭೆ ಮಾಜಿ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಉಪಾಧ್ಯಕ್ಷೆ ಗೀತಾ ಶಿವರಾಜ, ಸ್ಥಾಯಿ ಸಮಿತಿ ಅಧ್ಯಕ್ಷ ಚೇತನ ಪಾಟೀಲ, ಬಿಜೆಪಿ ಮಂಡಲ ಅಧ್ಯಕ್ಷ ಶರಣಯ್ಯ ಸೊಪ್ಪಿಮಠ ಸೇರಿದಂತೆ ಅನೇಕರು ಬಸವೇಶ್ವರರ ಪ್ರತಿಮೆ ಮಾಲಾರ್ಪಣೆ ಮಾಡಿದರು.
ಮಹಾಮನೆ ಸಮಿತಿ ಪರವಾಗಿ ಸಾಹಿತಿ ಮಹಾಂತೇಶ ಮಸ್ಕಿ, ಕವಿ ಸಿ. ದಾನಪ್ಪ ನಿಲೋಗಲ್, ದೊಡ್ಡಪ್ಪ ಮುರಾರಿ ಸೇರಿದಂತೆ ಅನೇಕರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ವಿವಿಧ ಸಂಘಟನೆಗಳು ಮುಖಂಡರು ಆಗಮಿಸಿ ಮಾಲಾರ್ಪಣೆ ಮಾಡಿದರು.
ತಹಶೀಲ್ದಾರ್ ಕಚೇರಿ, ತಾಲ್ಲೂಕು ಪಂಚಾಯಿತಿ, ಪುರಸಭೆ, ಕಾಂಗ್ರೆಸ್, ಬಿಜೆಪಿ ಕಚೇರಿ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.
ಬಸವೇಶ್ವರ ಭಾವಚಿತ್ರದ ಮೆರವಣಿಗೆ: ಬಸವ ಜಯಂತಿ ನಿಮತ್ತ ಮಹಾಮನೆ ಸಮಿತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಸವೇಶ್ವರ ಭಾವಚಿತ್ರದ ಮೆರವಣಿಗೆ ನಡೆಯಿತು. ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.