ಮಾನ್ವಿ: ತಾಲ್ಲೂಕಿನ ಯಡಿವಾಳ ಗ್ರಾಮದ ಹತ್ತಿರದ ತುಂಗಭದ್ರಾ ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಶವ ಶುಕ್ರವಾರ ಪತ್ತೆಯಾಗಿದೆ.
ಮಾನ್ವಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸೋಮಶೇಖರ ಎಸ್.ಕೆಂಚರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ‘ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ’ ಎಂದರು. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.