ಮಾನ್ವಿ: ತಾಲ್ಲೂಕಿನ ನೀರಮಾನ್ವಿ ಗ್ರಾಮದ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ದಿವ್ಯಾ ರಾಘವೇಂದ್ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 625 ಕ್ಕೆ 624 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 2ನೇ ರ್‍ಯಾಂಕ್ ಪಡೆದಿದ್ದಾರೆ.
ಹಿಂದೆ ಫಲಿತಾಂಶ ಬಂದಾಗ ದಿವ್ಯಾ 620 ಅಂಕಗಳನ್ನು ಗಳಿಸಿದ್ದರು. ನಂತರ ಇಂಗ್ಲಿಷ್ ಮತ್ತು ವಿಜ್ಞಾನ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಮಾಡಲು ಅರ್ಜಿ ಸಲ್ಲಿಸಿದ್ದರು. ಗುರುವಾರ ಪ್ರಕಟವಾದ ಫಲಿತಾಂಶದಲ್ಲಿ ಎರಡು ವಿಷಯಗಳಲ್ಲಿ ತಲಾ ಎರಡು ಅಂಕಗಳು ಹೆಚ್ಚಿಗೆ ಪಡೆದುಕೊಂಡು 624 ಅಂಕಗಳನ್ನು ಪಡೆದಿದ್ದಾರೆ ಎಂದು ಮುಖ್ಯ ಶಿಕ್ಷಕ ದೇವಯ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.