ADVERTISEMENT

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2021, 2:43 IST
Last Updated 26 ಅಕ್ಟೋಬರ್ 2021, 2:43 IST

ರಾಯಚೂರು: ದೇವದುರ್ಗ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೆ.ಇರಬಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಸಗಲ್ ಅಂಗನವಾಡಿ ಕೇಂದ್ರಕ್ಕೆ ಸಾಮಾನ್ಯ ವರ್ಗ, ಹಿರೇಬೂದೂರು ಅಂಗನವಾಡಿ ಕೇಂದ್ರ-01 ಸಾಮಾನ್ಯ, ಕರಡಿಗುಡ್ಡ ಅಂಗನವಾಡಿ ಕೇಂದ್ರ-03 ಪ.ಪಂಗಡ, ಜಾಲಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮುದುಗೋಟ ಅಂಗನವಾಡಿ ಕೇಂದ್ರಕ್ಕೆ ಪ.ಪಂಗಡ, ಹೇಮನಾಳ ಗ್ರಾಮ ಪಂಚಾಯಿತಿಯ ಬಸವಂತಪುರ ಅಂಗನವಾಡಿ ಕೇಂದ್ರಕ್ಕೆ ಸಾಮಾನ್ಯ ವರ್ಗದವರನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು. ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ ಪಾಸ್ ಆಗಿರಬೇಕು. ಗರಿಷ್ಠ 9ನೇ ತರಗತಿ ತೇರ್ಗಡೆ ಹೊಂದಿರುವವರು ಸಹ ಅರ್ಜಿ ಸಲ್ಲಿಸಬಹುದು. ನವೆಂಬರ್ 13ರೊಳಗೆ www.anganwadirecruitment.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ದೇವದುರ್ಗ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.