ADVERTISEMENT

ರೇಣುಕಾ ಮಾದರ ಸಾವು: ಗಲ್ಲು ಶಿಕ್ಷೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2019, 9:42 IST
Last Updated 26 ಸೆಪ್ಟೆಂಬರ್ 2019, 9:42 IST
   

ರಾಯಚೂರು:ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನ ಅಸಂತಾಪುರ ಗ್ರಾಮದ ಪಿ.ಯು ವಿದ್ಯಾರ್ಥಿನಿ ರೇಣುಕಾ ಮಾದರ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪೋಲಿಸರು ನಿರ್ಲಕ್ಷ್ಯ ವಹಿಸಿದ್ದಾರೆ. ಇದು ಅನುಮಾನಾಸ್ಪದವಾದ ಸಾವಾಗಿದ್ದು, ಕೂಡಲೇ ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಸಬೇಕು. ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ) ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ನೊಂದ ಕುಟುಂಬಕ್ಕೆ ದೊಡ್ಡ ಮೊತ್ತದ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಎಸ್‌ಎಫ್‌ಐ ಜಿಲ್ಲಾ ಉಪಾಧ್ಯಕ್ಷ ಲಿಂಗರಾಜ ಕಂದಗಲ್, ಮುಖಂಡರಾದ ಜುನೈದ್, ವೈಜನಾಥ, ದೀಲಾಶಾದ್, ಉಮೇಶ ನಾಯಕ, ಖಾಸಿಂಬೀ, ಮಾರುತಿ, ಬಸವರಾಜ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.