
ಪ್ರಜಾವಾಣಿ ವಾರ್ತೆ
ಕವಿತಾಳ: ಪಟ್ಟಣ ಸೇರಿದಂತೆ ವಿವಿಧೆಡೆ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ಧ್ವಜಾರೋಹಣ ನೆರವೇರಿಸಲಾಯಿತು.
ಇಲ್ಲಿನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಹನೀಯರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ ಧ್ವಜಾರೋಹಣ ನೆರವೇರಿಸಿದರು.
ಪಟ್ಟಣ ಪಂಚಾಯಿತಿ ಆವರಣದಲ್ಲಿ ಅಧ್ಯಕ್ಷೆ ರಾಜೇಶ್ವರಿ ತಿಪ್ಪಯ್ಯಸ್ವಾಮಿ, ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಗುರುಚಂದ್ರ ಯಾದವ ಧ್ವಜಾರೋಹಣ ಮಾಡಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ವಿವಿಧ ಖಾಸಗಿ ಶಾಲೆಗಳು ಹಾಗೂ ಸಹಕಾರ ಸಂಘಗಳ ಕಚೇರಿಗಳಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.