ADVERTISEMENT

Republic Day 2026: ದೇಶದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠ: ಶರಣಪ್ರಕಾಶ ಪಾಟೀಲ

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 4:12 IST
Last Updated 26 ಜನವರಿ 2026, 4:12 IST
   

ರಾಯಚೂರು: ಜಿಲ್ಲಾಡಳಿತದ ವತಿಯಿಂದ ಇಲ್ಲಿಯ 77ನೇ ಗಣರಾಜ್ಯೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ಧ್ವಜಾರೋಹಣ ನೆರವೇರಿಸಿದರು.

‘ದೇಶದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾಗಿದೆ. ‘ಸಂವಿಧಾನ ತೋರಿದ ಮಾರ್ಗದಲ್ಲಿ ಸಾಗಿದ ಕಾರಣ ದೇಶ ಸಾಕಷ್ಟು ಪ್ರಗತಿ ಸಾಧಿಸಿದೆ. ಸಂವಿಧಾನದ ಬೆಳಕಿನಲ್ಲೇ ದೇಶವು ಮುನ್ನೆಡೆಯುತ್ತಿದೆ‘ ಎಂದು ಬಣ್ಣಿಸಿದರು.

ಕ್ರೀಡಾಂಗಣದಲ್ಲಿ ನಾಗರಿಕ ‍ಪೊಲೀಸ್, ಗೃಹರಕ್ಷಕ ದಳ, ಜಿಲ್ಲಾ ಸಶಸ್ತ್ರ ಪಡೆ, ಎನ್‌ಸಿಸಿ, ಎನ್‌ಎಸ್‌ಎಸ್‌, ಭಾರತ ಸೇವಾದಳ, ಸ್ಕೌಟ್ಸ್‌ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು. ನಂತರ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ ಪ್ರದರ್ಶನ ನಡೆಯಿತು.

ADVERTISEMENT

ಮುಖ್ಯ ಅತಿಥಿಗಳಾಗಿ ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಜಿಲ್ಲಾಧಿಕಾರಿ ನಿತೀಶ್, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣಾಗ್ಷು ಗಿರಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ತಹಶೀಲ್ದಾರ್ ಸುರೇಶ ವರ್ಮಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.