ADVERTISEMENT

ಕುಡಿಯುವ ನೀರು ಸರಬರಾಜಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 9 ಜೂನ್ 2023, 11:44 IST
Last Updated 9 ಜೂನ್ 2023, 11:44 IST
ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದ ಕೃಷ್ಣ ನಗರ ಬಡಾವಣೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿ ಸಮರ್ಪಕ ನೀರು ಒದಗಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಕಾರ್ಮಿಕರ ಮಾನವ ಹಕ್ಕುಗಳ ಭ್ರಷ್ಟಾಚಾರ ವಿರೋಧಿ ಒಕ್ಕೂಟದ ಪದಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಅಮರಪ್ಪ ಅವರು ಶುಕ್ರವಾರ ಮನವಿ ಸಲ್ಲಿಸಲಾಯಿತು.

ಸಿರವಾರ: ತಾಲ್ಲೂಕಿನ ಕಲ್ಲೂರು ಗ್ರಾಮದ ಕೃಷ್ಣಾ ನಗರ ಬಡಾವಣೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿ ಸಮರ್ಪಕ ನೀರು ಒದಗಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಕಾರ್ಮಿಕರ ಮಾನವ ಹಕ್ಕುಗಳ ಭ್ರಷ್ಟಾಚಾರ ವಿರೋಧಿ ಒಕ್ಕೂಟದ ಪದಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಅಮರಪ್ಪ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಕೆಲ ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಗ್ರಾ.ಪಂ.ಅಧ್ಯಕ್ಷರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಪರಿಹರಿಸಿ ಕುಡಿಯುವ ನೀರು ಒದಗಿಸಬೇಕು. ಒದಗಿಸಲು ವಿಫಲರಾದಲ್ಲಿ ಸಾರ್ವಜನಿಕರೊಂದಿಗೆ ಗ್ರಾ.ಪಂ.ಕಚೇರಿಯ ಮುಂದೆ ಧರಣಿ ಮಾಡುವ ಎಚ್ಚರಿಕೆ ನೀಡಲಾಗಿದೆ ಎಂದರು.

ಭ್ರಷ್ಟಾಚಾರ ವಿರೋಧಿ ಒಕ್ಕೂಟದ ಜಿಲ್ಲಾ ಘಟಕ ಅಧ್ಯಕ್ಷ ಕೆ.ಶಿವಪ್ಪ ನಾಯಕ, ಪಂಪಣ್ಣ ಕಲ್ಲೂರು, ಪ್ರಧಾನ ಕಾರ್ಯದರ್ಶಿ ಅಡಿವೇಶ ಗಣದಿನ್ನಿ, ಕೆ.ಆರ್.ಎಸ್ ತಾಲ್ಲೂಕು ಘಟಕದ ಅಧ್ಯಕ್ಷ ವಿಶ್ವನಾಥ ನಾಯಕ, ಯೂಸೂಫ್ ಸಿರವಾರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.