ADVERTISEMENT

ರಾಯಚೂರು: ಪಿಯು 3ನೇ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳಿ

​ಪ್ರಜಾವಾಣಿ ವಾರ್ತೆ
Published 22 ಮೇ 2025, 13:06 IST
Last Updated 22 ಮೇ 2025, 13:06 IST
ಕೊಟ್ಟೂರು ಬಸಪ್ಪ
ಕೊಟ್ಟೂರು ಬಸಪ್ಪ   

ರಾಯಚೂರು: ‘ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ಹೆಸರು ನೋಂದಾಯಿಕೊಂಡು ಪರೀಕ್ಷೆಗೆ ಹಾಜರಾಗಬೇಕು’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೊಟ್ಟೂರು ಬಸಪ್ಪ ಮನವಿ ಮಾಡಿದರು.

ದ್ವಿತೀಯ ಪಿಯುಸಿ ಪರೀಕ್ಷಾ-2ಕ್ಕೆ ಅವಕಾಶ ಕಲ್ಪಿಸಿದ್ದರಿಂದ ಜಿಲ್ಲೆಯಲ್ಲಿ 6,788 ವಿದ್ಯಾರ್ಥಿಗಳ ಪೈಕಿ 1,625 ವಿದ್ಯಾರ್ಥಿಗಳು ಪಾಸಾಗಿದ್ದು, ಶೇ 23.09 ಫಲಿತಾಂಶ ಬಂದಿದೆ ಎಂದು ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.

‘ಮೂರನೇ ಪರೀಕ್ಷೆ-3ಯನ್ನು ಜೂನ್ 9ರಿಂದ 20ರವರೆಗೆ ನಡೆಸಲಿದೆ. ಪರೀಕ್ಷೆಗೆ ಉಚಿತವಾಗಿ ಹೆಸರು ನೋಂದಣಿಗೆ ಮೇ 28ಕೊನೆಯ ದಿನವಾಗಿದೆ. ‘2025ರ ಮಾರ್ಚ್‌ನಲ್ಲಿ ನಡೆದ ಪರೀಕ್ಷೆ-1ಗೆ ಒಟ್ಟು 18,414 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 10,818 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲೆಯ ಪ್ರತಿಶತ ಫಲಿತಾಂಶವು ಶೇ 58.75 ಆಗಿದೆ’ ಎಂದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸೋಮಶೇಖರಪ್ಪ ಹೊಕ್ರಾಣಿ, ಮಾನ್ವಿ ಸರ್ಕಾರಿ ಬಾಲಕರ ಪಿಯು ಕಾಲೇಜಿನ ಪ್ರಾಚಾರ್ಯ ಕುಂಟಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ಸುಧಾ ಎಂ.ಎ. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.