ADVERTISEMENT

ರಾಯಚೂರು | ರಸ್ತೆ ಅಪಘಾತ: ನಾಲ್ವರಿಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 14:55 IST
Last Updated 8 ಅಕ್ಟೋಬರ್ 2025, 14:55 IST
   

ಮಂತ್ರಾಲಯ (ರಾಯಚೂರು): ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ಚೆಟ್ನಿಹಳ್ಳ ಗ್ರಾಮದ ಬಳಿ ಬುಧವಾರ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ರೈಲು ನಿಲ್ದಾಣಕ್ಕೆ ಹೊರಟಿದ್ದ ಪ್ರಯಾಣಿಕರಿದ್ದ ಟಂಟಂ ಆಟೊ, ನಿಂತಿದ್ದ ಬೊಲರೊಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರ ಮೂರು ಬೆರಳುಗಳು ತುಂಡರಿಸಿದ್ದು, ನಾಲ್ವರಿಗೆ ಗಂಭೀರ ಗಾಯಗಳಗಾಗಿವೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ರಾಮನಹಳ್ಳಿ ಗ್ರಾಮದ ವೇಣುಗೋಪಾಲ, ಪತ್ನಿ ರಾಧಾ, ಪುತ್ರಿ ಶಾಲಿನಿ, ಶಾಲಿನಿ ಪತಿ ಸಹದೇವ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ವೇಣುಗೋಪಾಲ ಅವರ ಎಡಗೈ ಮೂರು ಬೆರಳುಗಳು ತುಂಡರಿಸಿವೆ.

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದು ರೈಲು ಮೂಲಕ ಊರಿಗೆ ಹೋಗಲು ರೈಲು ನಿಲ್ದಾಣಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಗಾಯಗೊಂಡರವರನ್ನು ಎಮ್ಮಿಗನೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಧವಾರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.