ಸಿಂಧನೂರು: ಟಾಟಾ ಏಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ತಾಲ್ಲೂಕಿನ ಸುಲ್ತಾನಾಪುರ ಗ್ರಾಮದ ಶಿವುಕುಮಾರ ದೇಸಾಯಿ (28) ಮೃತ ಯುವಕ.
ಸುಲ್ತಾನಪುರದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಆತನ ಅಂತ್ಯಕ್ರಿಯೆಗೆ ಸಿಂಧನೂರಿನಿಂದ ಹೊರಟಿದ್ದ ಸಂದರ್ಭದಲ್ಲಿ ತಾಲ್ಲೂಕಿನ ಅರಗಿನಮರ ಕ್ಯಾಂಪಿನ ಬಳಿ ಅಪಘಾತ ಸಂಭವಿಸಿದೆ. ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಮೃತಪಟ್ಟಿದ್ದಾನೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.