ADVERTISEMENT

ಮಸ್ಕಿ ಪಟ್ಟಣದ ಅಭಿವೃದ್ಧಿಗೆ ಆದ್ಯತೆ

ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ: ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 11:00 IST
Last Updated 1 ಜೂನ್ 2022, 11:00 IST
ಮಸ್ಕಿ ಪಟ್ಟಣದಲ್ಲಿ ಶಾಸಕ ಬಸನಗೌಡ ತುರ್ವಿಹಾಳ ಅವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು
ಮಸ್ಕಿ ಪಟ್ಟಣದಲ್ಲಿ ಶಾಸಕ ಬಸನಗೌಡ ತುರ್ವಿಹಾಳ ಅವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು   

ಮಸ್ಕಿ: ‘ಕೆಕೆಆರ್‌ಡಿಬಿ ಹಾಗೂ ಶಾಸಕರ ನಿಧಿಯಿಂದ ಹೆಚ್ಚಿನ ಅನುದಾನ ನೀಡಿ ಪಟ್ಟಣದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ’ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ತಿಳಿಸಿದರು.

ಪಟ್ಟಣದ ವಾರ್ಡ್‌ ಸಂಖ್ಯೆ 15, 17ರಲ್ಲಿ ಕಾಂಕ್ರಿಟ್ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯ. ಜನರ ಭರವಸೆಗಳಿಗೆ ಧಕ್ಕೆಯಾಗದಂತೆ ಕೆಲಸ ಮಾಡುತ್ತಿದ್ದೇನೆ’ ಎಂದು ಹೇಳಿದರು.

ADVERTISEMENT

ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕಾಂಕ್ರಿಟ್ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕೆ ಕೆಕೆಆರ್‌ಡಿಬಿಯಿಂದ ₹2 ಕೋಟಿ ನೀಡಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಇಂದು ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.

ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ಕಿಸಾನ್ ಸೆಲ್ ಘಟಕದ ತಾಲ್ಲೂಕು ಅಧ್ಯಕ್ಷ ಮೈಬುಸಾಬ ಮುದ್ದಾಪೂರ, ಮುಖಂಡ ಶ್ರೀಶೈಲಪ್ಪ ಬ್ಯಾಳಿ, ಕೆಪಿಸಿಸಿ ಸದಸ್ಯ ಎಚ್.ಬಿ.ಮುರಾರಿ, ಪುರಸಭೆ ಸದಸ್ಯರಾದ ದೊಡ್ಡ ಕರಿಯಪ್ಪ, ಮಲ್ಲಯ್ಯ ಮುರಾರಿ, ಬಸವರಾಜ ಬುಕ್ಕನಟ್ಟಿ, ರಮೇಶ ಕಾಸ್ಲಿ, ನಿಸಾರ್ ಅಹ್ಮದ್, ಮಲ್ಲಣ್ಣ ನಾಗರಬೆಂಚಿ, ಮಲ್ಲಯ್ಯ ಬಳ್ಳಾ, ಸುರೇಶ ಬ್ಯಾಳಿ, ಶರಣಪ್ಪ ಎಲಿಗಾರ, ಸಿದ್ದು ಮುರಾರಿ, ರವಿ ಮಡಿವಾಳ, ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ ಸೇರಿದಂತೆ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.