ಗಲಗ (ಜಾಲಹಳ್ಳಿ): ಇಲ್ಲಿಗೆ ಸಮೀಪದ ಗಲಗ ಗ್ರಾಮದ ವಾರ್ಡ್ ಸಂಖ್ಯೆ 3 ರಲ್ಲಿ ಹದಗೆಟ್ಟ ರಸ್ತೆಯನ್ನು ದುರಸ್ತಿ ಮಾಡಲಾಯಿತು.
ಅಂಬಿಗರ ಚೌಡಯ್ಯ ವೃತ್ತದಿಂದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ರಸ್ತೆ ಹದಗೆಟ್ಟಿತ್ತು.
ಗ್ರಾ.ಪಂ ವತಿಯಿಂದ ಶನಿವಾರ ಮರಂ ಹಾಕಿ ಗುಂಡಿ ಮುಚ್ಚಲಾಯಿತು. ಈ ಕೆಲಸಕ್ಕೆ ಗ್ರಾ.ಪಂ ಸದಸ್ಯರೂ ಕೈ ಜೋಡಿಸಿದರು.
ಈ ರಸ್ತೆಯಲ್ಲಿ ಚರಂಡಿ ನೀರು ಹರಿಯುತ್ತಿತ್ತು. ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ರೋಗಿಗಳನ್ನು ಆಸ್ಪತ್ರೆಗೆ ಕರೆತರಲು ಜನ ಹರಸಾಹಸ ಪಡುತ್ತಿದ್ದರು. ಗ್ರಾಮ ಪಂಚಾಯಿತಿ ಸದಸ್ಯರ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಸ್ವಚ್ಚತೆ ಮರೀಚಿಕೆಯಾಗಿ ಸಾಂಕ್ರಾಮಿಕ ರೋಗ ಭೀತಿ ಎದುರಾಗಿತ್ತು. ಈಗಾಗಲೇ ಕೊರೊನಾ ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ. ನಿಯಂತ್ರಣಕ್ಕೆ ಬರುತ್ತಿಲ್ಲ. ನಿತ್ಯ ಒಬ್ಬರಲ್ಲಿ ಸೋಂಕು ಲಕ್ಷಣಗಳು ಕಂಡುಬರುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.