ADVERTISEMENT

ಚಿಕ್ಕ ಮಂಚಾಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ₹158 ಕೋಟಿ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2024, 14:15 IST
Last Updated 4 ಫೆಬ್ರುವರಿ 2024, 14:15 IST
ಬೆಂಗಳೂರಿನಲ್ಲಿ ಈಚೆಗೆ ನಡೆದ ಸಚಿವ ಸಂಪುಟದಲ್ಲಿ ಚಿಕ್ಕಮಂಚಾಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ₹158 ಕೋಟಿ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ದದ್ದಲ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಸನ್ಮಾನಿಸಿದರು
ಬೆಂಗಳೂರಿನಲ್ಲಿ ಈಚೆಗೆ ನಡೆದ ಸಚಿವ ಸಂಪುಟದಲ್ಲಿ ಚಿಕ್ಕಮಂಚಾಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ₹158 ಕೋಟಿ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ದದ್ದಲ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಸನ್ಮಾನಿಸಿದರು   

ಶಕ್ತಿನಗರ: ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ನದಿಗೆ ಅಡ್ಡಲಾಗಿ ಚಿಕ್ಕಮಂಚಾಲಿ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣಕ್ಕೆ ಬೆಂಗಳೂರಿನಲ್ಲಿ ಈಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ₹158 ಕೋಟಿ ಅನುಮೋದನೆ ನೀಡಲಾಗಿದೆ.

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಜನರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಬೇಕು ಎಂದು ಕಳೆದ ಐದು ವರ್ಷಗಳಿಂದಲೂ ನಿರಂತರವಾಗಿ ಈ ಯೋಜನೆ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದರ ಪರಿಣಾಮವಾಗಿ ಕಾಂಗ್ರೆಸ್ ಸರ್ಕಾರದಿಂದ ಈ ಯೋಜನೆಗೆ ಅನುಮೋದನೆ ದೊರೆತಿದೆ ಎಂದು ಶಾಸ ಬಸನಗೌಡ ದದ್ದಲ್ ತಿಳಿಸಿದ್ದಾರೆ.

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ನೀರಾವರಿಯಿಂದ ವಂಚಿತವಾದ ಈ ಪ್ರದೇಶವನ್ನು ನೀರಾವರಿಯನ್ನಾಗಿ ಮಾಡಬೇಕು ಎಂದು ಕಳೆದ ಬಾರಿ ಶಾಸಕರಾದ ಸಂದರ್ಭದಿಂದ ಇಲ್ಲಿಯವರೆಗೂ ಕ್ಷೇತ್ರದ ಕೆರೆ ತುಂಬುವ ಯೋಜನೆಗಳು, ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿಗಳಿಗೆ ಸಾಕಷ್ಟು ಪ್ರಯತ್ನಿಸಲಾಗಿದೆ. ಇಂಥ ಅನೇಕ ಯೋಜನೆಗಳು ಕ್ಷೇತ್ರಕ್ಕೆ ಮಂಜೂರು ಮಾಡಿಸಿ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.