ಅಮಾನತು
ಲಿಂಗಸುಗೂರು: ಪಟ್ಟಣದಲ್ಲಿ ಅಕ್ಟೋಬರ್ 12ರಂದು ನಡೆದಿದ್ದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಪಿಡಿಒ ಪ್ರವೀಣಕುಮಾರ ಕೆ.ಪಿ. ಅವರನ್ನು ಕೆಲಸದಿಂದ ಶುಕ್ರವಾರ ಅಮಾನತುಗೊಳಿಸಲಾಗಿದೆ.
ಶಾಸಕ ಮಾನಪ್ಪ ವಜ್ಜಲ ಆಪ್ತ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಡಿಒ ಪ್ರವೀಣಕುಮಾರ ಅವರು ಆರ್‌ಎಸ್‌ಎಸ್ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಗಣವೇಷ ಧರಿಸಿ, ಪಥಸಂಚಲನದಲ್ಲಿ ಭಾಗವಹಿಸಿದ್ದರು.
‘ಸರ್ಕಾರಿ ನೌಕರನಿಗೆ ತರವಲ್ಲದ ರೀತಿಯಲ್ಲಿ ನಡೆದುಕೊಂಡಿದ್ದರಿಂದ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.