ADVERTISEMENT

ತಾಂತ್ರಿಕ ತೊಂದರೆ: ಆರ್‌ಟಿಪಿಎಸ್‌ 6ನೇ ಘಟಕ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2019, 12:04 IST
Last Updated 30 ಏಪ್ರಿಲ್ 2019, 12:04 IST
   

ಶಕ್ತಿನಗರ: ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) 6 ನೇ ಘಟಕದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದ್ದರಿಂದವಿದ್ಯುತ್‌ ತಯಾರಿಕೆಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ.

‘210 ಮೆಗಾವಾಟ್ ಸಾಮರ್ಥ್ಯದ 6ನೇ ವಿದ್ಯುತ್ ಘಟಕದಲ್ಲಿ ಬಾಯ್ಲರ್ ಟ್ಯುಬ್‌ನಲ್ಲಿ ಸೋರಿಕೆ ಕಂಡು ಬಂದಿದ್ದರಿಂದ ವಿದ್ಯುತ್‌ ತಯಾರಿಕೆ ಸ್ಥಗಿತ ಮಾಡಲಾಗಿದೆ. ಕೂಡಲೇ ದುರಸ್ತಿ ಕಾರ್ಯ ಆರಂಭಿಸಲಾಗಿದೆ. ಇನ್ನುಳಿದ ಏಳು ವಿದ್ಯುತ್ ಘಟಕಗಳಿಂದ 1,400 ಮೆಗಾವಾಟ್ ವಿದ್ಯುತ್ ತಯಾರಿಕೆ ಮಾಡಲಾಗುತ್ತಿದೆ’ ಎಂದು ಆರ್‌ಟಿಪಿಎಸ್ ಯೋಜನಾ ಪ್ರದೇಶದ ಮುಖ್ಯಸ್ಥ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT