ADVERTISEMENT

ಆರ್‌ಟಿಪಿಎಸ್‌ : 2 ವಿದ್ಯುತ್ ಘಟಕ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 4 ಮೇ 2021, 11:12 IST
Last Updated 4 ಮೇ 2021, 11:12 IST

ಶಕ್ತಿನಗರ: ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) ಎರಡು ವಿದ್ಯುತ್ ಘಟಕಗಳ ಉತ್ಪಾದನೆ ಮಂಗಳವಾರ ಸ್ಥಗಿತಗೊಳಿಸಲಾಗಿದೆ.

ರಾಜ್ಯದಲ್ಲಿ ಹೆಚ್ಚು ಮಳೆ ಆಗುತ್ತಿರುವುದರಿಂದ ವಿದ್ಯುತ್ ಬೇಡಿಕೆ ಇಲ್ಲದ ಪರಿಣಾಮ, 250 ಮೆಗಾವಾಟ್ ಸಾಮರ್ಥ್ಯದ 8ನೇ ವಿದ್ಯುತ್ ಘಟಕದ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ.

ಬಾಯ್ಲರ್ ಟ್ಯೂಬ್ ಸೋರಿಕೆಯಿಂದಾಗಿ 210 ಮೆಗವಾಟ್ ಸಾಮರ್ಥ್ಯದ 1ನೇ ವಿದ್ಯುತ್ ಘಟಕದ ಉತ್ಪಾದನೆ ಸ್ಥಗಿತಗೊಳಿಸಲಾಗಿದ್ದು , ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ ಎಂದು ಆರ್‌ಟಿಪಿಎಸ್‌ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಕೆ.ವಿ.ವೆಂಕಟಚಲಾಪತಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.