ADVERTISEMENT

ನವೋದಯದಲ್ಲಿ ಸಂಕ್ರಾಂತಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 7:17 IST
Last Updated 15 ಜನವರಿ 2026, 7:17 IST
ರಾಯಚೂರಿನ ನವೋದಯ ನರ್ಸಿಂಗ್ ಕಾಲೇಜಿನ ಆವರಣದಲ್ಲಿ ನಡೆದ ಮಕರ ಸಂಕ್ರಾಂತಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಬಿ.ಎಸ್‌ಸಿ (ನರ್ಸಿಂಗ್) ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳು
ರಾಯಚೂರಿನ ನವೋದಯ ನರ್ಸಿಂಗ್ ಕಾಲೇಜಿನ ಆವರಣದಲ್ಲಿ ನಡೆದ ಮಕರ ಸಂಕ್ರಾಂತಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಬಿ.ಎಸ್‌ಸಿ (ನರ್ಸಿಂಗ್) ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳು   

ರಾಯಚೂರು: ನವೋದಯ ನರ್ಸಿಂಗ್ ಕಾಲೇಜಿನ ಬಿ.ಎಸ್‌ಸಿ (ನರ್ಸಿಂಗ್) ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಂದ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಡಾ. ದಾನನಗೌಡ ಅವರು ಲಕ್ಷ್ಮೀ ಪೂಜಾ ವಿಧಿಯನ್ನು ನೆರವೇರಿಸಿದರು. ಮುಖ್ಯ ಅತಿಥಿ ಪ್ರೊ. ಹೆಟ್ಸಿ ಸುತನಕುಮಾರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಸಿಹಿ ತಿಂಡಿಗಳನ್ನು ವಿತರಿಸಲಾಯಿತು.

ಗಾಳಿಪಟ ಹಾರಿಸುವಂತಹ ಮನರಂಜನಾ ಚಟುವಟಿಕೆಗಳು ಕಾರ್ಯಕ್ರಮಕ್ಕೆ ಉತ್ಸಾಹ ತುಂಬಿದವು. ಪ್ರೊ. ರಾಖೀ ಸರ್ಕಾರ್ ಹಾಗೂ ಪ್ರೊ. ತಬಿತಾ ಅವರು ರಂಗೋಲಿ ಸ್ಪರ್ಧೆಯನ್ನು ಮೌಲ್ಯಮಾಪನ ಮಾಡಿ ವಿಜೇತರಿಗೆ ಪ್ರಮಾಣಪತ್ರಗಳನ್ನು ಪ್ರದಾನ ಮಾಡಿದರು,

ADVERTISEMENT

ಜ್ಯೋತಿಸ್ ಮತ್ತು ತಂಡದವರು ಪ್ರಾರ್ಥನಾ ಗೀತೆ ಹಾಡಿದರು. ಪುಣ್ಯ ಸ್ವಾಗತಿಸಿದರು. ಪಾರ್ವತಿ ವಂದಿಸಿದರು.

ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ರಾಯಚೂರಲ್ಲಿ ಮಕ್ಕಳು ಗಾಳಿಪಟ ಖರೀದಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.