
ಸಾವು
(ಪ್ರಾತಿನಿಧಿಕ ಚಿತ್ರ)
ಮಾನ್ವಿ (ರಾಯಚೂರು ಜಿಲ್ಲೆ): ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಗುರುವಾರ ಸಂಕ್ರಾಂತಿ ಹಬ್ಬದ ನಿಮಿತ್ತ ಪುಣ್ಯಸ್ನಾನಕ್ಕಾಗಿ ತುಂಗಭದ್ರಾ ನದಿಗೆ ಇಳಿದಿದ್ದ ಯುವಕ ನೀರುಪಾಲಾಗಿದ್ದಾರೆ.
ಮೃತ ಯುವಕನನ್ನು ಮಾನ್ವಿ ಪಟ್ಟಣದ ವಂಶಿ ರೆಡ್ಡಿ ರಾಜಲದಿನ್ನಿ (28) ಎಂದು ಗುರುತಿಸಲಾಗಿದೆ. ವಂಶಿ ರೆಡ್ಡಿ ಅವರು ಸ್ನಾನಕ್ಕಾಗಿ ನೀರಿಗೆ ಇಳಿದಾಗ ಮುಳುಗಿ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.ವಿಷಯ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದರು.
ವಿದ್ಯಾರ್ಥಿ ಸಾವು
ಶಹಾಬಾದ್ (ಕಲಬುರಗಿ ಜಿಲ್ಲೆ): ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಕಾಗಿಣಾ ನದಿಯಲ್ಲಿ ಈಜಲು ಹೋದ ಇಲ್ಲಿನ ಹನುಮಾನ ನಗರದ ನಿವಾಸಿ ವೆಂಕಟೇಶ (16) ಮೃತಪಟ್ಟಿದ್ದಾನೆ.
ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿ ಬಾಲಕನ ಮೃತದೇಹವನ್ನು ಶಹಾಬಾದ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಅವರ ತಂದೆ–ತಾಯಿ ಸೇರಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.